ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದ ಪತನ ಮುಗಿದು ಹೋದ ಕಥೆ. ಅದನ್ನು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಇವಾಗ ಏಕೆ ಮತ್ತೆ ಪ್ರಸ್ತಾಪಿಸುತ್ತಾರೋ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
ದೋಸ್ತಿ ಸರ್ಕಾರ ಪತನಕ್ಕೆ ಜುಲೈ 23 ಗುರುವಾರಕ್ಕೆ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಎಚ್‌ಡಿ ಕುಮಾರಸ್ವಾಮಿ ಕಾರ್ಯಕರ್ತರಿಗೆ ಸುದೀರ್ಘ ಪತ್ರವನ್ನು ಬರೆದಿದ್ದು ಅದರಲ್ಲಿ ಮೈತ್ರಿ ಸರ್ಕಾರ ಕೆಡವಲು ಕಾಂಗ್ರೆಸ್ ಕೆಲವು ಮುಖಂಡರು ಕಾರಣ ಎಂದು ಆರೋಪಿಸಿದ್ದರು.
ದೋಸ್ತಿ ಸರ್ಕಾರ ಪತನಕ್ಕೆ ಜುಲೈ 23 ಗುರುವಾರಕ್ಕೆ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಎಚ್‌ಡಿ ಕುಮಾರಸ್ವಾಮಿ ಕಾರ್ಯಕರ್ತರಿಗೆ ಸುದೀರ್ಘ ಪತ್ರವನ್ನು ಬರೆದಿದ್ದು ಅದರಲ್ಲಿ ಮೈತ್ರಿ ಸರ್ಕಾರ ಕೆಡವಲು ಕಾಂಗ್ರೆಸ್ ಕೆಲವು ಮುಖಂಡರು ಕಾರಣ ಎಂದು ಆರೋಪಿಸಿದ್ದರು.
ಸಿದ್ದರಾಮಯ್ಯ ಸರ್ಕಾರದ ಅವಧಿಯ ಯೋಜನೆಗಳನ್ನು ಮುಂದುವರಿಸಿಕೊಂಡು ಬಂದರೂ ತೃಪ್ತಿಗೊಳ್ಳದೆ ಮೈತ್ರಿ ಕೆಡವಲು ಲೋಕಸಭಾ ಚುನಾವಣೆ ಮುಗಿಯಲಿ, ಅಲ್ಲಿಯವರಿಗೆ ತಡೆಯಿರಿ ಎಂಬ 'ಸಿದ್ಧೌಷಧ' ಮಂತ್ರ ಜಪಿಸುತ್ತಲೇ ಕಾಂಗ್ರೆಸ್ಸಿಗರು ಬಂದರು. ಅದು ಜಗಜ್ಜಾಹೀರಾಯಿತು ಎಂದಿದ್ದರು.
ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ನನ್ನ ಸರ್ಕಾರ ತೆಗೆಯುವ ವಿಷಯದಲ್ಲಿ ಎಷ್ಟೊಂದು ಒಳ ಮತ್ತು ಕುಟಿಲ ತಂತ್ರಗಳ ಮೊರೆಹೋದರು ಎಂಬುದನ್ನು ಆ ದೊಡ್ಡ ನಾಯಕರೇ ಆತ್ಮಾವಲೋಕನ ಮಾಡಿಕೊಳ್ಳಲಿ. ಕಾಂಗ್ರೆಸ್ ಜೊತೆಗೆ ಮೈತ್ರಿಗೆ ಜೆಡಿಎಸ್ ಎಂದೂ ಮುಂದಾಗಿರಲಿಲ್ಲ. ಮುಂದೆಯೂ ಕೂಡ ಮೈತ್ರಿಗೆ ನಾವು ಹಪಾಹಪಿಸುತ್ತಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾಂಗ್ರೆಸ್ - ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಪತನವಾಗಿದ್ದು ಇಂದಿಗೆ ಮುಗಿದು ಹೋದ ಕಥೆ. ಈ ಕುರಿತಾಗಿ ಮಾತನಾಡಿ ಏನೂ ಪ್ರಯೋಜನವಿಲ್ಲ. ಆದರೆ, ಹೆಚ್.ಡಿ. ಕುಮಾರಸ್ವಾಮಿ ಈ ವಿಚಾರವನ್ನು ಮತ್ತೆ ಏಕೆ ರೀಕಾಲ್ ಮಾಡಿಕೊಳ್ಳುತ್ತಿದ್ದಾರೋ? ನನಗೆ ಗೊತ್ತಿಲ್ಲ. ಪ್ರಸ್ತುತ ಬಿಜೆಪಿ ಪಕ್ಷ ಅಧಿಕಾರದಲ್ಲಿದೆ. ಇವರ ಬಗ್ಗೆ ಮಾತಾಡೋದು ಬಿಟ್ಟು ಕುಮಾರಸ್ವಾಮಿ ಬಗ್ಗೆ ನಾನ್ಯಾಕೆ ಮಾತನಾಡಲಿ ಎಂದಿದ್ದಾರೆ.