ಇದೀಗ ಬಂದ ಸುದ್ದಿ:ಕುಮಾರಸ್ವಾಮಿಯವರು ಪದೇ ಪದೇ ಮೈತ್ರಿ ಸರ್ಕಾರದ ಬಗ್ಗೆ ಮಾತನಾಡಲು ಇದೆ ಕಾರಣ.

ಕಾಂಗ್ರೆಸ್‌- ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಬೀಳುವುದಕ್ಕೆ ಸಿದ್ದೌಷಧ ಕಾರಣ ಎಂಬ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ಬಗ್ಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅದೆಲ್ಲ ಮುಗಿದು ಹೋದ ಕಥೆಯಾಗಿದೆ. ಯಾಕೆ ಈಗ ಅವರು ರಿಕಾಲ್ ಮಾಡಿಕೊಳ್ತಿದ್ದಾರೋ ಗೊತ್ತಿಲ್ಲ. ಸಮ್ಮಿಶ್ರ ಸರ್ಕಾರ ಹೋಯ್ತು, ಈಗ ಬಿಜೆಪಿ ಸರ್ಕಾರ ಇದೆ. ಇವರ ಬಗ್ಗೆ ಮಾತಾಡೋದು ಬಿಟ್ಟು ಕುಮಾರಸ್ವಾಮಿ ಬಗ್ಗೆ ನಾನ್ಯಾಕೆ ಮಾತಾಡಲಿ? ಎಂದು ಪ್ರಶ್ನಿಸಿದ್ದಾರೆ.  ಇಂದು(ಬುಧವಾರ) ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹೆಚ್.ಡಿ. ಕುಮಾರಸ್ವಾಮಿ  ಅವರ ತಾತ್ಪರ್ಯವೆಲ್ಲ ನಂಗೆ ಅರ್ಥವಾಗಲ್ಲ, ಇವರು ಬರೆದಿರುವ ಕನ್ನಡವೆಲ್ಲ ಅರ್ಥವಾಗಲ್ಲ ಎಂದು ತಿಳಿಸಿದ್ದಾರೆ. 
ಲೆಕ್ಕ ಕೇಳುವ ಕಾಂಗ್ರೆಸ್‌ನವರಿಗೆ ಕೆಲಸ ಇಲ್ಲ ಎಂಬ ವೈದ್ಯಕಿಯ ಶಿಕ್ಷಣ ಸಚಿವ ಕೆ. ಸುಧಾಕರ್ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಲೆಕ್ಕ ಯಾರಿಗೆ ಕೊಡಬೇಕು? ಜನಪ್ರತಿನಿಧಿಗಳಿಗೆ, ಜನರಿಗೆ ಉತ್ತರ ಕೊಡಬೇಕು.ಸರ್ಕಾರ ಉತ್ತರ ಕೊಡಬೇಕು. ನಾನು ವಿಪಕ್ಷ ನಾಯಕನಾಗಿ ಸರ್ಕಾರಕ್ಕೆ ಲೆಕ್ಕ ಕೊಡಿ ಅಂತ ಕೇಳಿದ್ದೇನೆ. ನಾನು ಮೂರು ಸರಿ ಪತ್ರ ಬರೆದಿದ್ದೇನೆ, ಉತ್ತರ ಕೊಟ್ಟಿದ್ದಾರಾ? ಎಂದು ಪ್ರಶ್ನೆ ಮಾಡಿದ್ದಾರೆ. ನಿನ್ನೆ ಸಿಎಂ ಯಡಿಯೂರಪ್ಪ ಅವರು ಸುಳ್ಳು ಹೇಳಿದ್ದಾರೆ. ದುಡ್ಡು  ಹೊಡೆಯುವುದರಲ್ಲಿ ವಿಪಕ್ಷಗಳ ಸಹಕಾರ ಇಲ್ಲ. ಜನರ ಜೀವ ಉಳಿಸಲು ಸಹಕಾರ ನೀಡುತ್ತೇವೆ ಎಂದು ಹೇಳಿದ್ದಾರೆ.