ಬೆಂಗಳೂರು: ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರೋವರೆಗೂ ರಾಜ್ಯದಲ್ಲಿನ ಎಲ್ಲಾ ಸಚಿವರ ಖುರ್ಚಿ ಸುರಕ್ಷಿತವಾಗಿ ಇರಲಿದೆ ಅನ್ನೋ ಮಾಹಿತಿ ನ್ಯೂಸ್ಫಸ್ಟ್ಗೆ ಲಭ್ಯವಾಗಿದೆ.
ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಸಂದರ್ಭದಲ್ಲಿ ಸಚಿವರು ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೌಲ್ಯಮಾಪನ ನಡೆಸಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿತ್ತು. ಅಲ್ಲದೇ ಸ್ವತಃ ಸಿಎಂ ಬಿಎಸ್ವೈ ಕೂಡ ಈ ಬಗ್ಗೆ ಅನೇಕ ಬಾರಿ ಹೇಳಿಕೆ ನೀಡಿದ್ದರು. ಅದರಂತೆ ಜುಲೈ 26ಕ್ಕೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ. ಆದರೆ ಕೊರೊನಾ ಹಿನ್ನೆಲೆಯಲ್ಲಿ ಸಚಿವರ ಮೌಲ್ಯಮಾಪನ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ ಎನ್ನಲಾಗಿದೆ.
ಸಚಿವರ ಮೌಲ್ಯಮಾಪನ ಕೈಬಿಟ್ಟ ಹೈಕಮಾಂಡ್
ದೇಶದಲ್ಲಿ ಕೊರೊನಾ ವೈರಸ್ ತಾಂಡವ ಆಡುತ್ತಿದೆ. ಇದನ್ನ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ನಿರತವಾಗಿದೆ. ಜೊತೆಗೆ ಬಿಜೆಪಿ ಹೈಕಮಾಂಡ್ ನಾಯಕರೂ ಸಹ ಕೊರೊನಾವನ್ನ ನಿಯಂತ್ರಣಕ್ಕೆ ತರುವ ವಿಚಾರದಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರದ ಸಚಿವರ ಮೌಲ್ಯಮಾಪನ ನಡೆಸುವ ಚಿಂತನೆಯನ್ನ ಹೈಕಮಾಂಡ್ ಸದ್ಯಕ್ಕೆ ಕೈಬಿಟ್ಟಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಸಚಿವ ಸ್ಥಾನವನ್ನ ಕಳೆದುಕೊಳ್ಳುವ ಭೀತಿಯಲ್ಲಿದ್ದ ಕೆಲವು ಮುಖಂಡರು ನಿಟ್ಟುಸಿರು ಬಿಟ್ಟಿದ್ದಾರೆ ಅಂತಾ ಹೇಳಲಾಗಿದೆ.