ಕೊಲೆ ಎಂದು ಗಂಭೀರ ಆರೋಪ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ಇಂದು ಮುಂಜಾನೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ ಶಾಸಕರನ್ನು ದೇವೆಂದ್ರನಾಥ್ ರೇ ಎಂದು ಗುರುತಿಸಲಾಗಿದೆ. ತಮ್ಮ ಮನೆಯಿಂದ 1 ಕಿ.ಮೀ ದೂರದಲ್ಲಿರುವ ಮಾರ್ಕೆಟ್ ನಲ್ಲಿ ಶಾಸಕರ ಮೃತದೇಹ ಪತ್ತೆಯಾಗಿದೆ. ಅದರೆ ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಬಿಜೆಪಿ ಗಂಭೀರವಾಗಿ ಆರೋಪಿಸುತ್ತಿದೆ.
ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಶಾಸಕರ ಮನೆಗೆ ಕೆಲವು ಮಂದಿ ಬಂದಿದ್ರು. ಅಲ್ಲದೆ ಅವರನ್ನು ಬಲವಂತವಾಗಿ ಮನೆಯಿಂದ ಹೊರಬರುವಂತೆ ಹೇಳಿದ್ದಾರೆ ಎಂದು ಕುಟುಂಬದ ಸದಸ್ಯರೊಬ್ಬರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಶೀಘ್ರವೇ ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಇಂದು ಬೆಳಗ್ಗೆ ಸ್ಥಳೀಯರು ನೇಣುಬಿಗಿದ ಸ್ಥಿತಿಯಲ್ಲಿದ್ದ ಶಾಸಕರನ್ನು ಕಂಡು ಗಾಬರಿಗೊಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇತ್ತ ಬಿಜೆಪಿಯೂ ನಮ್ಮ ಶಾಸಕರನ್ನು ಕೊಲೆ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಿದೆ. ಅಲ್ಲದೆ ಈ ಸಂಬಂಧ ಬಿಜೆಪಿ ಮುಖಂಡರೊಬ್ಬರು ಟ್ವೀಟ್ ಮಾಡಿ, ಬಂಗಾಳದಲ್ಲಿ ಬಿಜೆಪಿ ನಾಯಕರ ಹತ್ಯೆಗೆ ಅಂತ್ಯ ಕಾಣುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ದೇವೇಂದ್ರನಾಥ್ ರೇ ಅವರು 2016ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು. ಆ ಬಳಿಕ ಅಂದರೆ ಕಳೆದ ವರ್ಷ ಲೋಕಸಭಾ ಚುನಾವಣೆಯ ನಂತರ ಅವರು ಬಿಜೆಪಿ ಸೇರಿದ್ದರು.
Comments
Post a Comment