ಇದೀಗ ಬಂದ ಸುದ್ದಿ: ಜೆಡಿಎಸ್ ಪಕ್ಷಕ್ಕೆ ದೊಡ್ಡಮಟ್ಟದ ಹಾನಿಯಾಗಿದೆ ಎಂದು ಎಚ್ ಡಿ ದೇವೇಗೌಡರು ಹೇಳಲು ಕಾರಣವೇನು?

ಸಮಿಶ್ರ ಸರ್ಕಾರ ಅವಧಿಯಲ್ಲಿ ಪಕ್ಷದ ನಿಷ್ಠಾವಂತ ನಾಯಕರು  ಕಾರ್ಯಕರ್ತರ ಹಿತ ಕಾಯುವಲ್ಲಿ ಎಡವಿದ್ದೇವೆ. ಇದರಿಂದ ಪಕ್ಷಕ್ಕೆ ದೊಡ್ಡಮಟ್ಟದ ಹಾನಿಯಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡರು ಹೇಳಿದ್ದಾರೆ.
ಪಕ್ಷದ ಶಾಸಕರು, ಮಾಜಿ ಶಾಸಕರು, ವಿವಿಧ ಘಟಕಗಳು ಅಧ್ಯಕ್ಷರಿಗೆ ಪತ್ರ ಬರೆದಿರುವ ಅವರು ಪಕ್ಷ ಸಂಘಟನೆಯಲ್ಲಿ ತೊಡಗುವಂತೆ ಮನವಿ ಮಾಡಿದ್ದಾರೆ.

ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಪಕ್ಷದ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ನಿಮ್ಮ ಹಿತ ರಕ್ಷಿಸುವಲ್ಲಿ ನಾವು ಎಡವಿ ತಪ್ಪು ಮಾಡಿದ್ದೇವೆ ಎಂಬುದನ್ನು ಪ್ರಾಂಜಲ ಮನಸ್ಸಿನಿಂದ ಒಪ್ಪಿಕೊಳ್ಳುತ್ತೇನೆ ಅದರಿಂದ ನೀವು ಉತ್ಸಾಹ ಕಳೆದುಕೊಂಡಿದ್ದರಿಂದ ಅದು ಪಕ್ಷಕ್ಕೆ ದೊಡ್ಡ ಹಾನಿಯನ್ನು ಮಾಡಿದೆ, ಸ್ವಲ್ಪ ಮಂಕಾಗಿರುವ ಮತ್ತು ನಿಸ್ತೇಜವಾಗಿರುವ ಪಕ್ಷವನ್ನು ಇನ್ನೂ ಒಂದು ವರ್ಷದ ಅವಧಿಯಲ್ಲಿನ ಚುರುಕುಗೊಳಿಸಲೇ ಬೇಕಾಗಿದೆ ಇದರ ಅನಿವಾರ್ಯವನ್ನು ನೀವು ಅರ್ಥ ಮಾಡಿಕೊಳ್ಳುತ್ತೀರಿ ಎಂದು ನಾನು ನಂಬಿದ್ದೇನೆ ಎಂದು ಹೇಳಿದ್ದಾರೆ.