ಬೆಂಗಳೂರು: ಕೋವಿಡ್ ವಿಚಾರದಲ್ಲಿ ಕಾಂಗ್ರೆಸ್‌ನವರು ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ವೈದ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಆರೋಪಿಸಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವೆಂಟಿಲೇಟರ್ ಇಲ್ಲ, ಅದಿಲ್ಲ, ಇದಿಲ್ಲ ಎಂದವರು ಈಗ ಭ್ರಷ್ಟಾಚಾರದ ಆರೋಪ ಮಾಡುವ ಕೀಳುಮಟ್ಟಕ್ಕೆ ಇಳಿಯುತ್ತಾರೆ ಎಂದು ನಾನು ಭಾವಿಸಿರಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
''ಈ ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಅಶ್ವತ್ಥನಾರಾಯಣ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಒಂದೂವರೆಗಂಟೆ ಪತ್ರಿಕಾಗೋಷ್ಠಿ ನಡೆಸಿ ವಿವರಣೆ ನೀಡಿದ್ದಾರೆ. ಇದುವರೆಗೆ 290 ಕೋಟಿ ರೂ.ನಷ್ಟು ಮಾತ್ರ ಖರೀದಿಯಾಗಿದೆ. 33 ಕೋಟಿ ರೂ. ಮೊತ್ತದ ಸಾಮಾಗ್ರಿಯನ್ನು ವೈದ್ಯ ಶಿಕ್ಷಣ ಇಲಾಖೆಯಿಂದ ಖರೀದಿಸಲಾಗಿದೆ,'' ಎಂದು ಹೇಳಿದರು.
''ತಪ್ಪು ನಡೆದಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಒಬ್ಬ ಮಂತ್ರಿಯಾಗಿ ಇದಕ್ಕಿಂತ ಹೆಚ್ಚಿನದ್ದನ್ನು ಹೇಳುವುದಕ್ಕೆ ಏನಿದೆ? 33 ಕೋಟಿ ರೂ.ಗೆ 33 ಕೋಟಿ ಪ್ರಶ್ನೆ ಕೇಳಿದರೆ ಹೇಗೆ ಕೆಲಸ ಮಾಡಲು ಸಾಧ್ಯ? ಎಂದು ವ್ಯಂಗ್ಯವಾಡಿದರು.