ಇದೀಗ ಬಂದ ಸುದ್ದಿ: ಸಿದ್ದರಾಮಯ್ಯರನ್ನು ಕಾಂಗ್ರೆಸ್ ಗೆ ಕರೆತಂದಿದ್ದು ಯಾರು ಗೊತ್ತಾ?

ರಾಜಕಾರಣದಲ್ಲಿ ಎಲ್ಲರನ್ನೂ ತುಳಿಯುವುದೇ ಸಿದ್ದರಾಮಯ್ಯನವರ ಕೆಲಸ ಎಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು,ಈ ಹಿಂದೆ ಜೆಡಿಎಸ್ ಪ್ರಾಥಮಿಕ ಸದಸ್ಯತ್ವದಿಂದ‌ ಕಿತ್ತು ಹಾಕಿದ್ದ ಸಿದ್ದರಾಮಯ್ಯರನ್ನು ಕಾಂಗ್ರೆಸ್ ಗೆ ಕರೆದುಕೊಂಡು ಬಂದಿದ್ದು ನಾನು. ಹಿಂದುಳಿದ‌ ವರ್ಗಗಳ ನಾಯಕ ಸಿದ್ದರಾಮಯ್ಯರನ್ನು ಈ ರಾಜ್ಯದ ಮುಖ್ಯಮಂತ್ರಿ ಮಾಡಿದ್ದಕ್ಕೆ ನನಗೆಂದಿಗೂ ಪಶ್ಚಾತ್ತಾಪ ಆಗಿಲ್ಲ, ಸಂತೋಷವಾಗಿದೆ. ಆದರೆ ಸಿದ್ದರಾಮಯ್ಯ ಎಲ್ಲರನ್ನೂ ತುಳಿಯುವ ಕೆಲಸ ಮಾಡಿದರು. ಪ್ರತಿಪಕ್ಷಗಳು ನಾಯಕರು ಪ್ರಧಾನಿ ಮೋದಿ ವಿರುದ್ಧ ಆಪಾದನೆ ಮಾಡುತ್ತಿದ್ದಾರೆ. ಆ ನಾಯಕರು ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಕೇವಲ ಹಿಟ್ ಅಂಡ್ ರನ್ ನಂತೆ ಆರೋಪ ಮಾಡಬೇಡಿ. ಕಾಂಗ್ರೆಸ್ ನಾಯಕರೇ ಅಪ್ರಬುದ್ದರಂತೆ ಮಾತನಾಡಬೇಡಿ ಎಂದರು. ​ಮೋದಿಯವರ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಮಾತನಾಡಿ, ಮೋದಿ ಈ ದೇಶದ ಮೊದಲ ಅಹಿಂದ ಪ್ರಧಾ‌ನಿ. ಅಹಿಂದ ಎನ್ನುವ ಸಿದ್ದರಾಮಯ್ಯ ಇದನ್ನು ನೆನಪಿನಲ್ಲಿಟ್ಟುಕೊಳ್ಳಲಿ. ಮೋದಿಗೂ ದೇವರಾಜ ಅರಸುರವರಿಗೂ ಸಾಕಷ್ಟು ಸಾಮ್ಯತೆಯಿದೆ. ಮೋದಿಯವರಲ್ಲಿ ನಾನು ದೇವರಾಜ ಅರಸು ಅವರನ್ನು ಕಾಣುತ್ತಿದ್ದೇ‌ನೆ. ಮೋದಿಯವರನ್ನು ಟೀಕಿಸುವ ಮುನ್ನ ಯೋಚಿಸಿ ಮಾತನಾಡಿ ಎಂದರು.