ಸಿದ್ದರಾಮಯ್ಯನವರೇ, ಅಂದು ಮಾಡಿದ ಅ ತಪ್ಪು ಈಗ ಗೊತ್ತಾಯ್ತಾ? ಸರಿಯಾದ ಪ್ರಶ್ನೆಯ ಮೂಲಕ ಕಿಡಿಕಾರಿದ ಬಿಜೆಪಿ ನಾಯಕ.

ಬೆಂಗಳೂರು,ಆ.12- ಎಸ್‍ಡಿಪಿಐ ಮತ್ತು ಕೆಐಎಫ್‍ಡಿ 1600 ಪುಂಡರ ವಿರುದ್ಧ ಇದ್ದ 175 ಕ್ರಿಮಿನಲ್ ಕೇಸುಗಳನ್ನು ನೀವು 2015ರಲ್ಲಿ ವಾಪಸ್ಸು ತೆಗೆದುಕೊಂಡಿದ್ದು ತಪ್ಪು ಅಂತ ನಿಮಗೆ ಈಗಲಾದರೂ ಅನ್ನಿಸುತ್ತಿದೆಯೇ ಸಿದ್ದರಾಮಯ್ಯನವರೇ?

ಇಷ್ಟಾಗಿಯೂ ಪುಂಡ ಮುಸಲ್ಮಾನರನ್ನು ಖಂಡಿಸಲು ಏಕೆ ನಿಮಗೆ ಮನಸ್ಸು ಬರುತ್ತಿಲ್ಲ ಸಾರ್? ಎಂದು ಮೈಸೂರು-ಕೊಡುಗು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

ಮತ್ತೊಂದು ಟ್ವೀಟ್‍ನಲ್ಲಿ ಕಂದಾಯ ಸಚಿವ ಆರ್. ಅಶೋಕ್, ಶಾಂತಿಯಿಂದ ಬದುಕೋಣ ಎಂಬುದು ನಮ್ಮ ಆಶಯ. ಅಶಾಂತಿಯೇ ಕೆಲವರ ರಾಜಮಾರ್ಗ ಎಂದಾದರೆ, ಆ ಮಾರ್ಗವನ್ನೇ ಬದಲಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಮ್ಮ ಪೊಲೀಸ್ ವ್ಯವಸ್ಥೆ ಸದೃಡವಾಗಿದೆ ಎಂದು ಅವರು ಹೇಳಿದ್ದಾರೆ.

ನಿನ್ನೆ ರಾತ್ರಿ ಗಲಭೆ ನಡೆದ ಜಾಗದಲ್ಲಿ ಅಲ್ಲಿನ ಸ್ಥಳೀಯರು ಕಾರ್ಯವಿರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ದಿಶೆಯಲ್ಲೂ ಸರ್ಕಾರ ತನಿಖೆ ಮಾಡಲಿದೆ ಎಂದು ಟ್ವೀಟ್‍ನಲ್ಲಿ ಹೇಳಿದ್ದಾರೆ.


Comments