ಇದೀಗ ಬಂದ ಸುದ್ದಿ: ಯಡಿಯೂರಪ್ಪ ನವರು ಬಹಳ ಭಾವುಕರಾಗಿದ್ದಾರೆ!!!
ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಯನ್ನು ಭಾವುಕರಾಗಿ ವೀಕ್ಷಣೆ ಮಾಡಿದರು. ಕೋವಿಡ್ ಸೋಂಕು ತಗುಲಿರುವ ಯಡಿಯೂರಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿದ್ದಾರೆ.
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿದರು. ಮಣಿಪಾಲ್ ಆಸ್ಪತ್ರೆಯ ವಿಶೇಷ ವಾರ್ಡ್‌ನಲ್ಲಿರುವ ಯಡಿಯೂರಪ್ಪ ಅವರು ಅಲ್ಲಿಯೇ ಟಿವಿಯಲ್ಲಿ ನೇರ ಪ್ರಸಾರ ವೀಕ್ಷಣೆ ಮಾಡಿದರು.
ಬುಧವಾರ ನರೇಂದ್ರ ಮೋದಿ ಅವರು ಭೂಮಿಪೂಜೆ ಮಾಡುವ ಐತಿಹಾಸಿಕ ಕಾರ್ಯಕ್ರಮದ ನೇರಪ್ರಸಾರವನ್ನು ಆಸ್ಪತ್ರೆಯಿಂದಲೇ ಭಾವುಕರಾಗಿ ವೀಕ್ಷಿಸಿದರು. ಯಡಿಯೂರಪ್ಪ ಕಾರ್ಯಕ್ರಮ ನೋಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾನುವಾರ ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕೋವಿಡ್ ಸೋಂಕು ತಗುಲಿದೆ. ಆದರೆ, ಸೋಂಕಿನ ಯಾವುದೇ ಲಕ್ಷಣಗಳು ಇಲ್ಲ, ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments
Post a Comment