ನವದೆಹಲಿ : ಕಾಂಗ್ರೆಸ್ ವಕ್ತಾರ ರಾಜೀವ್ ತ್ಯಾಗಿ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರಾಜೀವ್ ತ್ಯಾಗಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಬುಧವಾರ ರಾತ್ರಿ ರಾಜೀವ್ ತ್ಯಾಗಿ (53) ತೀವ್ರ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ರಾಷ್ಟ್ರೀಯ ವಾಹಿನಿಗಳಲ್ಲಿ ನಡೆದ ಚರ್ಚೆಗಳಲ್ಲಿ ಅವರು ಪಾಲ್ಗೊಂಡಿದ್ದರು.
ಎಐಸಿಸಿ, ಪ್ರಿಯಾಂಕಾ ವಾದ್ರಾ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ರಾಜೀವ್ ತ್ಯಾಗಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪಕ್ಷ ಒಬ್ಬ ನಿಷ್ಠಾವಂತ ಕಾರ್ಯಕರ್ತರನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಸಹ ರಾಜೀವ್ ತ್ಯಾಗಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ರಾಜೀವ್ ತ್ಯಾಗಿ ಅವರು ಪಕ್ಷಕ್ಕಾಗಿ ಸುಧೀರ್ಘ ಸೇವೆ ಸಲ್ಲಿಸಿದ್ದರು. ಅವರ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲು ಎಂದು ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು ಗಲಭೆ ಬಗ್ಗೆ ಮಾತನಾಡಿದ್ದರು : ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿ ಮಂಗಳವಾರ ರಾತ್ರಿ ಗಲಭೆ ನಡೆದಿತ್ತು. ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು.
ರಾಷ್ಟ್ರೀಯ ವಾಹಿನಿಗಳಲ್ಲಿ ಈ ಕುರಿತು ನಡೆದ ಚರ್ಚೆಯಲ್ಲಿ ಬುಧವಾರ ಬೆಳಗ್ಗೆ ರಾಜೀವ್ ತ್ಯಾಗಿ ಪಾಲ್ಗೊಂಡಿದ್ದರು. ರಾತ್ರಿ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ.

Comments
Post a Comment