ಬ್ರೇಕಿಂಗ್ ನ್ಯೂಸ್ : ಕೊರೋನಾ ಗೆದ್ದು ಬಂದ ಯಡಿಯೂರಪ್ಪನವರು ಮೊದಲು ಮಾಡಿದ್ದಾದರೂ ಏನು!!!

ಕೊರೋನಾ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್.​ ಯಡಿಯೂರಪ್ಪ ಡಿಸ್ಚಾರ್ಜ್​​ ಆಗಿದ್ದಾರೆ. ಕೊರೋನಾ ಪಾಸಿಟಿವ್ ದೃಢಪಟ್ಟಿದ್ದರಿಂದ ಆಗಸ್ಟ್ 2 ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಒಂದು ವಾರಗಳ ಕಾಲ ಚಿಕಿತ್ಸೆ ಪಡೆದ ಬಿಎಸ್​ವೈ ಇಂದು (ಸೋಮವಾರ) ಕೊರೋನಾ ಮುಕ್ತರಾಗಿ ಬಿಡುಗಡೆಯಾಗಿದ್ದಾರೆ.

ಇನ್ನು ಬಿಎಸ್​ವೈ ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಸಿಎಂ ಯಡಿಯೂರಪ್ಪ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದು, ಅದು ಈ ಕೆಳಗಿನಂತಿದೆ. 
ಬಿಎಸ್‌ವೈ ಫಸ್ಟ್ ರಿಯಾಕ್ಷನ್ 
ಟ್ವೀಟ್ ಮಾಡಿರುವ ಯಡಿಯೂರಪ್ಪ "ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದೇನೆ. ನಿಮ್ಮೆಲ್ಲರ ಶುಭಹಾರೈಕೆಗಳಿಂದ ಗುಣಮುಖನಾಗಿದ್ದೇನೆ. ವೈದ್ಯರ ಸಲಹೆಯಂತೆ ಇನ್ನು ಕೆಲವು ದಿನ ಮನೆಯಲ್ಲೇ ಕ್ವಾರಂಟೈನ್ ನಲ್ಲಿ ಇರಲಿದ್ದೇನೆ. ಆತ್ಮವಿಶ್ವಾಸ, ವೈದ್ಯಕೀಯ ಚಿಕಿತ್ಸೆಗಳಿಂದ ಕೊರೋನಾ ಗೆಲ್ಲಬಹುದು. ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ" ಎಂದು ರಾಜ್ಯದ ಜನರಿಗೆ ಕರೆ ನೀಡಿದ್ದಾರೆ.


Comments