ಬ್ರೇಕಿಂಗ್ ನ್ಯೂಸ್: ಕುತೂಹಲ ಮೂಡಿಸಿದ ಯಡಿಯೂರಪ್ಪನವರು ಮಾಡಿದಾದರೂ ಏನು??

ಕುತೂಹಲ ಮೂಡಿಸಿದ ಯಡಿಯೂರಪ್ಪನವರು ಮಾಡಿದಾದರೂ ಏನು??
ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯಪಾಲ ವಜೂಬಾಯಿ ವಾಲಾ ಅವರನ್ನು ಭೇಟಿ ಮಾಡಿದ್ದಾರೆ. ಪ್ರಸಕ್ತ ಬಿಜೆಪಿ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಭೇಟಿ ಮಹತ್ವ ಪಡೆದುಕೊಂಡಿದೆ. ಸಿಎಂ ಯಡಿಯೂರಪ್ಪ ಅವರಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಾಥ್ ಕೊಟ್ಟಿದ್ದಾರೆ.
ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ ಎಂಬ ಮಾಹಿತಿಯಿದೆ. ಜೊತೆಗೆ, ಮೊನ್ನೆಯಷ್ಟೇ ಡಿಸಿಎಂ ಲಕ್ಷ್ಮಣ ಸವದಿ ಅವರು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಿ ಬಂದಿದ್ದರು. ಹೀಗಾಗಿ ಯಡಿಯೂರಪ್ಪ ಅವರ ದಿಢೀರ್ ಭೇಟಿ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ರಾಜ್ಯಪಾಲರೇ ಸಿಎಂ ಯಡಿಯೂರಪ್ಪ ಅವರಿಗೆ ಬುಲಾವ್ ಕಳುಹಿಸಿದ್ದರು ಎನ್ನಲಾಗಿದೆ. ಹೀಗಾಗಿ ಸಿಎಂ ಯಡಿಯೂರಪ್ಪ ಅವರು ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ.
ವಿಧಾನ ಪರಿಷತ್ತಿಗೆ ನಾಮ ನಿರ್ದೇಶನ, ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ಮಾಡಲಾಗಿದೆ ಎಂಬ ಮಾಹಿತಿಯಿದೆ. ಜೊತೆಗೆ ಇತ್ತೀಚೆಗೆ ಡಿಸಿಎಂ ಲಕ್ಷ್ಮಣ ಸವದಿ ಅವರು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಿ ಬಂದಿದ್ದರು. ತಮ್ಮ ಭೇಟಿಯ ಕುರಿತು ಡಿಸಿಎಂ ಸವದಿ ಸ್ಪಷ್ಟನೆ ಕೊಟ್ಟಿದ್ದರಾದರೂ ಅವರ ಹೈಕಮಾಂಡ್ ಭೇಟಿ ಕುತೂಹಲ ಮೂಡಿಸಿತ್ತು. ಅದಾದ ಬಳಿಕ ಸಿಎಂ, ರಾಜ್ಯಪಾಲರ ಭೇಟಿ ಮತ್ತಷ್ಟು ಕುತೂಹಲ ಮೂಡಿಸಿದೆ.
ಹೀಗೆ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಪಾಲರ ದಿಢೀರ್ ಭೇಟಿ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಜೊತೆಗಿದ್ದರು. ತಮ್ಮ ಆಪ್ತ ಬಸವರಾಜ್ ಬೊಮ್ಮಾಯಿ ಅವರನ್ನು ಸಿಎಂ ಜೊತೆಗೆ ಕರೆದುಕೊಂಡು ಹೋಗಿ ಭೇಟಿ ಮಾಡಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ.
ಭೇಟಿ ಬಳಿಕ ಮಾತನಾಡಿರುವ ಬೊಮ್ಮಾಯಿ ಅವರು, ರಾಜ್ಯಪಾಲರು ನಮ್ಮನ್ನ ಕರೆದಿದ್ದರು. ಕೆಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂದೆ ಮತ್ತಷ್ಟು ಕ್ರಮಕೈಗೊಳ್ಳಿ. ಜೊತೆಗೆ ಆಯುರ್ವೇದ ಚಿಕಿತ್ಸೆಗೆ ಒತ್ತು ಕೊಡಿ ಎಂದು ರಾಜ್ಯಪಾಲರು ಸೂಚಿಸಿದ್ದಾರೆಂದು ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ತಡೆಯಲು ರಾಜ್ಯ ಸರ್ಕಾರ ಸಮರ ಸಾರಿದೆ. ಅದನ್ನೂ ಕೂಡ ರಾಜ್ಯಪಾಲರು ಶ್ಲಾಘಿಸಿದ್ದಾರೆಂದು ಗೃಹ ಸಚಿವ ಬೊಮ್ಮಾಯಿ ಹೇಳಿದ್ದಾರೆ. ಡ್ರಗ್ಸ್ ವಿರುದ್ಧ ಸಮರ ಸಾರಿರುವ ಕ್ರಮಕ್ಕೆ ರಾಜ್ಯಪಾಲರು ಮೆಚ್ಚುಗೆ ವ್ಯಕ್ತಪಡಿಸಿದರು. ಇನ್ನು ದೊಡ್ಡ ಪ್ರಮಾಣದಲ್ಲಿ ಕೆಲಸ ಮಾಡಿ ಎಂದು ಹೇಳಿದ್ದಾರೆ.
ಶೀಘ್ರದಲ್ಲಿಯೇ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮಹತ್ವದ ಬದಲಾವಣೆ ಆಗಲಿದೆ ಎಂಬ ಚರ್ಚೆ ಬಿಜೆಪಿಯಲ್ಲಿಯೆ ನಡೆದಿದೆ. ಜೊತೆಗೆ ಇತ್ತೀಚೆಗೆ ಹೈಕಮಾಂಡ್ ಹಾಗೂ ರಾಜ್ಯ ಬಿಜೆಪಿ ನಾಯಕರ ಭೇಟಿ, ನಡೆಗಳು ಇದಕ್ಕೆ ಪುಷ್ಟಿಕೊಡುವಂತೆ ಇವೆ.
ಒಟ್ಟಾರೆ ಕಳೆದ ಕೆಲವು ದಿನಗಳ ಹಿಂದೆ ಸಿಎಂ ಯಡಿಯೂರಪ್ಪ ಅವರು ರಾಜ್ಯಪಾಲರನ್ನು ಭೇಟಿಯಾಗಿ ಪರಿಷತ್‌ಗೆ ನಾಮನಿರ್ದೇಶನ ಮಾಡುವವರ ಪಟ್ಟಿ ಕೊಟ್ಟು ಬಂದಿದ್ದರು. ಬಳಿಕ ಡಿಸಿಎಂ ಲಕ್ಷ್ಮಣ ಸವದಿ ಅವರು ರಾಜ್ಯಪಾಲರನ್ನು ಭೇಟಿ ಯಾಗಿ ಚರ್ಚಿಸಿ, ನಂತರ ಸವದಿ ಅವರು ಹೈಕಮಾಂಡ್ ಭೇಟಿ ಮಾಡಿದ್ದರು. ಹೀಗಾಗಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ಮುಂದುವರೆದಿದೆ.