ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ನಾಯಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬುದ್ಗಂ ಜಿಲ್ಲೆಯಲ್ಲಿ ಅಬ್ದುಲ್ ಹಮೀದ್ ನಜರ್ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ನಜರ್ ಬುದ್ಗಂನ ಒಬಿಸಿ ಮೋರ್ಚಾದ ಅಧ್ಯಕ್ಷರು ಎಂದು ತಿಳಿದುಬಂದಿದೆ.
"ಅಬ್ದುಲ್ ಹಮೀದ್ ನಜರ್ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಭಯೋತ್ಪಾದಕರು ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ" ಎಂದು ಬುದ್ಗಂ ಪೊಲೀಸರು ಹೇಳಿದ್ದಾರೆ.
ಗುಂಡಿನ ದಾಳಿಯಿಂದ ಗಾಯಗೊಂಡಿರುವ ಅಬ್ದುಲ್ ಹಮೀದ್ ನಜರ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
3ನೇ ದಾಳಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ನಾಯಕರ ಮೇಲೆ ನಡೆಯುತ್ತಿರುವ 3ನೇ ಗುಂಡಿನ ದಾಳಿ ಇದಾಗಿದೆ.
ಕುಲಗಾಮ್ ಜಿಲ್ಲೆಯಲ್ಲಿ ಗುರುವಾರ ಬಿಜೆಪಿ ನಾಯಕರೊಬ್ಬರ ಮೇಲೆ ಗುಂಡಿನ ದಾಳಿ ನಡೆದಿತ್ತು. ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷ ಮತ್ತು ಗ್ರಾಮದ ಸರ್ ಪಂಚ್ ಸಾಜದ್ ಅವರು ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದರು.
ಮಂಗಳವಾರ ಕುಲಗಾಮ್ ಗ್ರಾಮದ ಬಿಜೆಪಿ ನಾಯಕ ಅರಿಫ್ ಅಹ್ಮದ್ ಮೇಲೆ ಗುಂಡಿನ ದಾಳಿ ನಡೆದಿತ್ತು. ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
Comments
Post a Comment