ಇದೀಗ ಬಂದ ಸುದ್ದಿ: ಜೆಡಿಎಸ್ ನ ಪ್ರಮುಖ ನಾಯಕ ಇಂದು ವಿಧಿವಶ!!!
ಬೆಂಗಳೂರು: ತುಮಕೂರಿನ ಶಿರಾ ಕ್ಷೇತ್ರದ ಜೆಡಿಎಸ್ ಶಾಸಕ, ಮಾಜಿ ಸಚಿವ ಬಿ. ಸತ್ಯನಾರಾಯಣ ಮಂಗಳವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಸತ್ಯನಾರಾಯಣ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ. "ಮಾಜಿ ಸಚಿವರು ಮತ್ತು ಶಾಸಕರು ಹಾಗೂ ನನ್ನ ಸನ್ಮಿತ್ರರು ಆದ ಬಿ. ಸತ್ಯನಾರಾಯಣ್ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ," ಎಂದು ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಸತ್ಯನಾರಾಯಣ್ ಮತ್ತು ನನ್ನ ಸ್ನೇಹ ಸುಮಾರು 3 ದಶಕಗಳದ್ದು. ಅವರಿಲ್ಲದ ದಿನಗಳನ್ನು ನೆನೆಯಲು ನನ್ನಿಂದ ಸಾಧ್ಯವೇ ಇಲ್ಲ. ಸತ್ಯನಾರಾಯಣ್ ಅವರು ತುಂಬಾ ಮೃದು ಸ್ವಭಾವದವರು ಅವರ ಅಗಲಿಕೆಯಿಂದ ನಮ್ಮ ನಾಡಿಗೆ ತುಂಬಲಾಗದ ನಷ್ಟ ಉಂಟಾಗಿದೆ. ಮೃತರ ಆತ್ಮಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ದೇವೇಗೌಡರು ಹೇಳಿದ್ದಾರೆ.

Comments
Post a Comment