ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು.. ನಾಳೆಯಿಂದಲೇ ಹಾಸನದಲ್ಲಿ ಹೋರಾಟ ಆರಂಭವಾಗಲಿದೆ. ಕೊರೊನಾ ಹಿನ್ನೆಲೆಯಲ್ಲಿ ಪ್ರತಿಭಟನೆಯಲ್ಲಿ 200 ಜನ ಪಾಲ್ಗೊಳ್ಳಲಿದ್ದಾರೆ. ಸಾಂಕೇತಿಕ ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಕೊಡುತ್ತೇವೆ. ರಾಜ್ಯಪಾಲರಿಗೂ ಮನವಿ ಕಳಹಿಸುತ್ತೇವೆ. ಈ ಹೋರಾಟ ರಾಜ್ಯದ ಸಣ್ಣ, ಮಧ್ಯಮ ವರ್ಗದ ರೈತರಿಗಾಗಿ ಮಾಡುತ್ತಿದ್ದೇವೆ. ನಾಳೆಯಿಂದ ಆರಂಭವಾಗುವ ಪ್ರತಿಭಟನೆ ರಾಜ್ಯಾದ್ಯಂತ ಮುಂದುವರಿಯಲಿದೆ ಎಂದರು.
ಕೆ.ಜಿ.ಹಳ್ಳಿ ಪ್ರಕರಣದ ಕುರಿತು ಮಾತನಾಡಿದ ಅವರು, ಪ್ರಕರಣದ ಸಂಬಂಧ ಸುಮಾರು 150ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಪ್ಪಿತಸ್ಥರ ಮೇಲೆ ಏನು ಕ್ರಮ ಬೇಕಾದರೂ ಕೈಗೊಳ್ಳಿ. ಯಾರು ತಪ್ಪು ಮಾಡಿದ್ದಾರೋ ಅವರ ಮೇಲೆ ಕ್ರಮವಹಿಸಿ ಎಂದಿದ್ದಾರೆ.
ಅಖಂಡ ಶ್ರೀನಿವಾಸಮೂರ್ತಿ ಅವರು, ಸಿಬಿಐ ತನಿಖೆಗೆ ವಹಿಸಲು ಕೇಳಿದ್ದಾರೆ. ಈ ಬಗ್ಗೆ ಸರ್ಕಾರ ತೀರ್ಮಾನ ಮಾಡಬೇಕು. ನಿಷ್ಪಕ್ಷಪಾತವಾಗಿ ಕ್ರಮಕೈಗೊಳ್ಳಿ ಅಂತ ಸರ್ಕಾರಕ್ಕೆ ಮನವಿ ಮಾಡುವೆ. ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಸುಡೋದು, ಕಾರು ಸುಡುವ ದೃಶ್ಯವನ್ನ ನೋಡಿದ್ದೇನೆ. ಆ ಹೆಣ್ಮಕ್ಕಳು ಕಣ್ಣೀರು ಹಾಕೋದನ್ನೂ ನೋಡಿದ್ದೇನೆ. ಅವರಿಗಾದ ಅನ್ಯಾಯ ಸರಿಪಡಿಸಲು ಸರ್ಕಾರ ಎಲ್ಲಾ ಕ್ರಮ ಕೈಗೊಳ್ಳಬೇಕು. ಒಬ್ಬ ಎಂಎಲ್‌ಎ ಮನೆ ಸುಟ್ಟಿದ್ದು ಇದೇ ಮೊದಲು. ಅವರು ಹಿಂದೆ ನಮ್ಮ ಪಕ್ಷದಲ್ಲಿದ್ರು ಅನ್ನೋದು ಬೇರೆ ವಿಚಾರ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Comments
Post a Comment