ಇದೀಗ ಬಂದ ಸುದ್ದಿ : ಕೊರೋನಾಗೆ ಬಲಿಯಾದ ಬಿಜೆಪಿ ಶಾಸಕ!!!
ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಸಿ. ಗುರುಸ್ವಾಮಿ (68)ಕೊರೋನಾ ಸೋಂಕಿನಿಂದ ಬುಧವಾರ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೋವಿಡ್ ದೃಢಪಟ್ಟಿದ್ದರಿಂದಾಗಿ ಆಗಸ್ಟ್ 5 ರಂದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಸುಮಾರು ಬೆಳಿಗ್ಗೆ 7 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.
ವೃತ್ತಿಯಲ್ಲಿ ವಕೀಲರಾಗಿದ್ದ ಸಿ. ಗುರುಸ್ವಾಮಿಯವರು ಹಿರಿಯ ರಾಜಕೀಯ ನಾಯಕ, ಕೇಂದ್ರದ ಮಾಜಿ ಸಚಿವ ರಾಜಶೇಖರಮೂರ್ತಿಯವರ ಶಿಷ್ಯರಾಗಿದ್ದರು. ಜನತಾ ಪಕ್ಷ, ಜನತಾದಳದಿಂದ ರಾಜಕೀಯ ಜೀವನ ಆರಂಭಿಸಿದ್ದರು. ರಾಜಶೇಖರಮೂರ್ತಿಯವರು ಬಿಜೆಪಿ ಸೇರಿದ ಸಂದರ್ಭದಲ್ಲಿ ಗುರುಸ್ವಾಮಿ ಅವರೂ ಬಿಜೆಪಿ ಸೇರಿದರು.
ಬಿಜೆಪಿಯ ಮೊದಲ ಶಾಸಕ ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಏಕೈಕ ಬಿಜೆಪಿ ಶಾಸಕರಾಗಿದ್ದರು. 1999ರಲ್ಲಿ ನಡೆದ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಗುರುಸ್ವಾಮಿ ಕಣಕ್ಕಿಳಿದಿದ್ದರು. ಕಾಂಗ್ರೆಸ ಭದ್ರಕೋಟೆಯಾಗಿದ್ದ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲದ ಬಾವುಟ ಹಾರಿಸಿದ್ದರು.

Comments
Post a Comment