ಇದೀಗ ಬಂದ ಸುದ್ದಿ: ಬಿಜೆಪಿಯ ಪ್ರಭಾವಿ ಶಾಸಕನಿಗೆ ಕೊರೋನಾ ದೃಢ!! ಅನೇಕ ನಾಯಕರು ಹಾಗೂ ಬಿಜೆಪಿ ಕಾರ್ಯಕರ್ತರು ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿದ್ದಾರೆ.
ಹೊಸದಿಲ್ಲಿ: ಇಡೀ ವಿಶ್ವವನ್ನು ಬೆಂಬಿಡದೆ ಕಾಡುತ್ತಿರುವ ಕೊರೊನಾ ವೈರಸ್ ಭಾರತದಲ್ಲಿಯೂ ಆರ್ಭಟ ಮುಂದುವರೆಸಿದೆ. ಈಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಸಿಟಿವ್ ಬಂದಿರುವ ವಿಷಯವನ್ನು ಅಮಿತ್ ಶಾ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.
ತಮ್ಮ ಟ್ವೀಟ್‌ನಲ್ಲಿ ಅಮಿತ್ ಶಾ, ಕೊರೊನಾ ವೈರಸ್‌ನ ಆರಂಭಿಕ ರೋಗ ಲಕ್ಷಣಗಳು ಕಂಡುಬಂದ ನಂತರ, ಟೆಸ್ಟ್ ಮಾಡಿಸಿದ್ದೇನೆ. ಕೊರೊನಾ ವರದಿಯು ಪಾಸಿಟಿವ್ ಬಂದಿದ್ದು, ಆರೋಗ್ಯ ಸ್ಥಿರವಾಗಿದೆ. ಆದರೆಮ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಹೇಳಿದ್ದಾರೆ.
ಇನ್ನು, ಕಳೆದ ಕೆಲವು ದಿನಗಳಲ್ಲಿ ನನ್ನ ಜೊತೆ ಸಂಪರ್ಕ ಹೊಂದಿದವರು ತಪಾಸಣೆ ಮಾಡಿಸಿ ಹಾಗೂ ಕ್ವಾರಂಟೈನ್‌ನಲ್ಲಿರಿ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ನಂತರ, ಅನೇಕ ನಾಯಕರು ಹಾಗೂ ಬಿಜೆಪಿ ಕಾರ್ಯಕರ್ತರು ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮೂಲಕ ಅಮಿತ್ ಶಾ ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಬೆಳಗ್ಗೆಯಷ್ಟೇ ಉತ್ತರ ಪ್ರದೇಶ ಸರಕಾರದಲ್ಲಿ ಸಚಿವೆಯಾಗಿದ್ದ ಕಮಲ್ ರಾಣಿ ವರುಣ್ ಕೊರೊನಾ ವೈರಸ್‌ನಿಂದ ಮೃತಪಟ್ಟಿದ್ದರು. ಕಳೆದ 24 ಗಂಟೆಗಳಲ್ಲಿ 54,375 ಜನರಿಗೆ ದೇಶದಲ್ಲಿ ಕೊರೊನಾ ಸೋಂಕು ತಗುಲಿದೆ.ಇದರಿಂದ ಸೋಂಕಿತರ ಸಂಖ್ಯೆ 17,50,723ಕ್ಕೆ ಏರಿದೆ.