ಬಿಜೆಪಿ ಕಾರ್ಯಕರ್ತನನ್ನು ಉಗ್ರರು ಗುಂಡಿಕ್ಕಿ ಹತ್ಯೆಗೆ ಯತ್ನಿಸಿದ ಬೆನ್ನಲ್ಲೇ ಜಮ್ಮು ಕಾಶ್ಮೀರದ ನಾಲ್ವರು ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಜಮ್ಮು ಕಾಶ್ಮೀರದ ಬುಡ್ಗಾಮ್ ಮೋಹಿಂದ್ ಪುರ ಗ್ರಾಮದ ನಿವಾಸಿ ಹಾಗೂ ಬಿಜೆಪಿ ಕಾರ್ಯಕರ್ತ ಅಬ್ದುಲ್ ಹಮೀದ್ ನಜರ್ ಅವರನ್ನು ಉಗ್ರರು ಗುಂಡಿಕ್ಕಿ ಹತ್ಯೆಗೆ ಯತ್ನಿಸಲಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ನಜರ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಯಕರ್ತನ ಹತ್ಯೆ ವಿಷಯ ತಿಳಿಯುತ್ತಿದ್ದಂತೆ ಬುಡ್ಗಾಮ್ ಜಿಲ್ಲೆಯ ನಾಲ್ವರು ಬಿಜೆಪಿ ಮುಖಂಡರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದರಲ್ಲಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೇರಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಈಗಾಗಲೇ ಇಬ್ಬರು ಬಿಜೆಪಿ ಮುಖಂಡರನ್ನು ಹತ್ಯೆ ಮಾಡಲಾಗಿದೆ ಅಲ್ಲದೇ ಒಬ್ಬನನ್ನು ಕಿಡ್ನಾಪ್ ಮಾಡಿದ್ದು ಇನ್ನೂ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಇವೆಲ್ಲ ಬೆಳವಣಿಗೆಗಳ ಬಳಿಕ ಈಗ ನಾಲ್ಕು ಮುಖಂಡರು ರಾಜೀನಾಮೆ ನೀಡಿದ್ದಾರೆ.
Comments
Post a Comment