ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿಯೇ ವೀಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿ ಅಧಿವೇಶನಕ್ಕೆ ಸಿದ್ಧರಾಗುತ್ತಿರುವ ಕೆಪಿಸಿಸಿ ಅಧ್ಯಕ್ಷರು.. ಅಧಿವೇಶನದಲ್ಲಿ ಸರ್ಕಾರವನ್ನ ಹೇಗೆ ಕಟ್ಟಿಹಾಕಬೇಕು ಅನ್ನೋದ ಬಗ್ಗೆ ಚರ್ಚೆ ನಡೆಸಿದ್ದಾರಂತೆ.
ಈ ವೇಳೆ ಕೆಲವು ಕಾಂಗ್ರೆಸ್ ಶಾಸಕರು ರಾಜ್ಯ ಸರ್ಕಾರ ಸಮರ್ಪಕ ಅನುದಾನ ನೀಡುತ್ತಿಲ್ಲ. ಕೊರೊನಾ ಸಾಂಕ್ರಮಿಕ ರೋಗ ನಿಯಂತ್ರಣ ಹಾಗೂ ಚಿಕಿತ್ಸೆಗೆ ವಿಚಾರದ ಬಗ್ಗೆ ಡಿಕೆಎಸ್ ಬಳಿ ದೂರಿದ್ದಾರೆ. ಅಲ್ಲದೇ ನೆರೆ ಪೀಡಿತ ಕ್ಷೇತ್ರಗಳ ಶಾಸಕರು ಡಿಕೆಎಸ್ ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರಂತೆ.
ಅಧಿವೇಶನದ ಸಂದರ್ಭದಲ್ಲಿ ಈ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ ಮಾಡೋಣ ಅಂತಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಾಸಕರಿಗೆ ಭರವಸೆ ನೀಡಿದ್ದಾರೆ. ಅಲ್ಲದೇ ಶಾಸಕರ ಆರೋಪಕ್ಕೆ ಸಂಬಂಧಿಸಿದಂತೆ ಸಮರ್ಪಕ ದಾಖಲೆಗಳೊಂದಿಗೆ ಪೂರ್ವ ತಯಾರಿ ಮಾಡಿಕೊಂಡು ಅಧಿವೇಶನಕ್ಕೆ ಬರುವಂತೆ ಶಾಸಕರಿಗೆ ಶಿವಕುಮಾರ್ ಸೂಚನೆ ನೀಡಿದ್ದಾರೆ ಅನ್ನೋ ಮಾಹಿತಿ ನ್ಯೂಸ್ಫಸ್ಟ್ಗೆ ಲಭ್ಯವಾಗಿದೆ.
Comments
Post a Comment