ರಾಜ್ಯದಲ್ಲಿ ಎಸ್‌ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಲು ಬಿಜೆಪಿ ಈ ಹಿಂದೆ ಹೋರಾಟ ಮಾಡಿತ್ತು. ಇದೀಗ ಬೆಂಗಳೂರು ಗಲಭೆ ಬಳಿಕ ರಾಜ್ಯ ಬಿಜೆಪಿ ಸರ್ಕಾರ ಈ ಸಂಘಟನೆಗಳನ್ನ ಬ್ಯಾನ್ ಮಾಡಲು ಚಿಂತನೆ ನಡೆಸಿದೆ.
ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ಸಂಬಂಧ ಗೃಹ ಸಚಿವರ ಜತೆ ಸಮಾಲೋಚನೆ ಮಾಡಲಾಗಿದೆ. ಎಸ್‌ಡಿಪಿಐ ನಿಷೇಧದ ಬಗ್ಗೆ ಒಂದು ಹೆಜ್ಜೆ ಮುಂದೆ ಇಡಲಾಗಿದೆ. ಗೃಹ ಇಲಾಖೆಯಿಂದ ಎಸ್‌ಡಿಪಿಐ ಕೃತ್ಯಗಳ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದ್ದು, ಎಸ್‌ಡಿಪಿಐ ಹಾಗೂ ಪಿಎಫ್ಐ ನಿಷೇಧ ಆಗಲಿದೆ ಎಂದು ಸ್ಪಷ್ಟಪಡಿಸಿದರು.
ಡಿಜೆ ಹಳ್ಳಿ ಪ್ರಕರಣ ಕೋಮುಗಲಭೆಯಲ್ಲ. ಅದೊಂದು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಕಾಂಗ್ರೆಸ್ ಶಾಸಕರು ಮತ್ತು ಪಾಲಿಕೆ ಸದಸ್ಯರ ನಡುವಿನ ಮುಸುಕಿನ ಗುದ್ದಾಟದಿಂದ ದೊಂಬಿ ಉಂಟಾಗಿದೆ. ಇದರಲ್ಲಿ ಎಸ್‌ಡಿಪಿಐ ಕೈವಾಡವೂ ಇದೆ ಎಂದು ಕಂದಾಯ ಸಚಿವ . ಅಶೋಕ್ ಹೇಳಿದರು. ಬೆಂಗಳೂರು ಗಲಭೆಯ ಪ್ರಕರಣದಲ್ಲಿ ಎಸ್‌ಡಿಪಿಗೆ ನೇರ ಸಂಬಂಧ ಇದೆ. ಅಲ್ಲದೇ ರಾಜ್ಯದಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಮುಖಂಡರ ಹತ್ಯೆಯಲ್ಲಿ ಎಸ್‌ಡಿಪಿಐ ಹಾಗೂ ಪಿಎಫ್ಐನ ಕೈವಾಡ ಇದ್ದು, ಇದಕ್ಕೆ ನಮ್ಮ ಬಳಿ ಸಾಕ್ಷಿ ಇದೆ. ಇದರಿಂದ ಈ ಸಂಘಟನೆ ನಿಷೇಧಿಸಲು ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದರು.
Comments
Post a Comment