ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರ, ಶಾಸಕರು ಪಕ್ಷ ಬದಲಾವಣೆಯಿಂದ ಅನರ್ಹಗೊಂಡ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರದ ವಿಧಾನಸಭಾ ಕ್ಷೇತ್ರಗಳು ಸದ್ಯ ಖಾಲಿ ಇದ್ದು, ಅವುಗಳಿಗೆ ಉಪ ಚುನಾವಣೆ ನಡೆಯಬೇಕಿದೆ.
ಆದರೆ, ಈ ಪೈಕಿ ಶಿರಾ ಮತ್ತು ಮಸ್ಕಿ ಕ್ಷೇತ್ರಗಳಿಗೆ ಚುನಾವಣೆ ನಡೆಸಲು ಯಾವುದೇ ಸಮಸ್ಯೆ ಇಲ್ಲ. ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದ ಶಿರಾ ಕ್ಷೇತ್ರ ಖಾಲಿಯಾಗಿದೆ. ಅತ್ತ ಮಸ್ಕಿ ಕ್ಷೇತ್ರದಿಂದ 2018ರಲ್ಲಿ ಕಾಂಗ್ರೆಸ್‌ನಿಂದ ಗೆದ್ದಿದ್ದ ಪ್ರತಾಪ್ ಗೌಡ ಪಾಟೀಲ್ ಮೈತ್ರಿ ಸರ್ಕಾರದ ವೇಳೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಳಿಕ ಅವರ ವಿರುದ್ಧ ಈ ಹಿಂದೆ ಹೂಡಿದ್ದ ಅಕ್ರಮ ಮತದಾನ ದಾವೆಯನ್ನು ಬಿಜೆಪಿ ಮುಖಂಡ ಬಸನಗೌಡ ತುರ್ವಿಹಾಳ ವಾಪಸ್ ಪಡೆದಿದ್ದಾರೆ. ಇದರಿಂದ ಈ ಕ್ಷೇತ್ರದ ಉಪಚುನಾವಣೆಗೆ ದಾರಿ ಸಲೀಸಾಗಿದೆ.
ಆದರೆ, ರಾಜರಾಜೇಶ್ವರಿ ನಗರ ಪ್ರತಿನಿಧಿಸಿದ್ದ ಮುನಿರತ್ನ ಅವರು ಕಳೆದ ಸಾರ್ವತ್ರಿಕ ಚುನಾವಣೆ ವೇಳೆ ನಕಲಿ ಮತದಾರ ಪಟ್ಟಿಸೃಷ್ಟಿಸಿದ್ದಾರೆಂಬ ಆರೋಪದ ಪ್ರಕರಣ ಇನ್ನೂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿರುವುದರಿಂದ ಈ ಕ್ಷೇತ್ರಕ್ಕೆ ಸದಸ್ಯಕ್ಕೆ ಉಪಚುನಾವಣೆ ನಡೆಯುವ ಸಾಧ್ಯತೆ ಕಡಿಮೆ ಇದೆ. ಹಾಗಾಗಿ ಬಿಹಾರ ಚುನಾವಣೆ ವೇಳೆ ರಾಜ್ಯದಲ್ಲಿ ಉಪಚುನಾವಣೆ ನಡೆದರೂ ಎರಡು ಕ್ಷೇತ್ರಗಳಿಗೆ ಮಾತ್ರ ಚುನಾವಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Comments
Post a Comment