ಇದೀಗ ಬಂದ ಸುದ್ದಿ!! ಡಿಕೆ ಶಿವಕುಮಾರ್ ಗೆ ಮತ್ತೆ ಆರೋಗ್ಯದಲ್ಲಿ ಏರು ಪೆರು!! ಇದೀಗ ಮತ್ತೆ ಆಸ್ಪತ್ರೆಗೆ ದಾಖಲಾದ ಡಿಕೆಶಿ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಕೆಲವು ದಿನಗಳ ಹಿಂದೆ ಅವರಿಗೆ ಕೋವಿಡ್ ಸೋಂಕು ಇರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು ಗುಣಮುಖರಾದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.
ಇದಾದ ಬಳಿಕ ಮನೆಯಲ್ಲೇ ವಿಶ್ರಾಂತಿ ಪಡೆದುಕೊಳ್ಳುವಂತೆ ವೈದ್ಯರ ಸೂಚನೆಯ ಹಿನ್ನೆಲೆಯಲ್ಲಿ ಹೊರಗೆಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಮತ್ತೆ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ.
ಕಳೆದ ಎರಡು ದಿನಗಳಲ್ಲಿ ಜ್ವರ ಕಾಣಿಸಿಕೊಂಡಿರುದರಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸುಧಾರಿಸಿಕೊಳ್ಳುತ್ತಿದ್ದು ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡ ಬಳಿಕ ಅವರೆಲ್ಲಾ ಗುಣಮುಖರಾಗಿದ್ದಾರೆ.
Comments
Post a Comment