ಕಾಂಗ್ರೆಸ್‌ನ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್ ಮತ್ತು ಕಪಿಲ್ ಸಿಬಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಬೇಕು ಎಂದು ಕೇಂದ್ರ ಸಚಿವ ರಾಮ್‌ದಾಸ್ ಅಠಾವಳೆ ಸಲಹೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ವಿವಾದಗಳು ಎದ್ದಿವೆ. ಆ ಪಕ್ಷದ ಹಿರಿಯ ನಾಯಕರಾದ ಗುಲಾಮ ನಬಿ ಆಜಾದ್ ಮತ್ತು ಕಪಿಲ್ ಸಿಬಲ್ ಅವರಿಗೆ ನೀವು ಬಿಜೆಪಿ ಪರ ಕೆಲಸ ಮಾಡುತ್ತೀರಿ ಎಂದು ರಾಹುಲ್ ಗಾಂಧಿಯವರೇ ಹೇಳಿದ್ದಾರೆ. ಹೀಗಾಗಿ ಅವರು ಕಾಂಗ್ರೆಸ್‌ನಲ್ಲಿ ಉಳಿಯದೇ ರಾಜೀನಾಮೆ ನೀಡಿ ಭಾರತೀಯ ಜನತಾ ಪಾರ್ಟಿಗೆ ಸೇರಬೇಕು ಎಂದು ರಾಮ್ ದಾಸ್ ಅಠಾವಳೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೇಂದ್ರದಲ್ಲಿ ಆಡಳಿತದಲ್ಲಿರುವ ಎನ್‌ಡಿಎ ಸರ್ಕಾರ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅಠಾವಳೆ, ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ ಎಂದು ಕಾಂಗ್ರೆಸ್ ಹೈಕಮಾಂಡ್‌ನಿಂದ ಆರೋಪ ಎದುರಿಸುತ್ತಿರುವ ನಾಯಕರು ಜ್ಯೋತಿರಾದಿತ್ಯ ಸಿಂಧಿಯಾ ಅವರಂತೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಲಿ ಎಂದು ಹೇಳಿದ್ದಾರೆ.
ಇದೇ ವೇಳೆ ಬಿಜೆಪಿ ಇನ್ನೂ ಹಲವು ವರ್ಷಗಳ ಕಾಲ ದೇಶದಲ್ಲಿ ಆಡಳಿತ ನಡೆಸಲಿದೆ ಎಂದು ಹೇಳಿದ ಅಠಾವಳೆ ಮುಂದಿನ ಚುನಾವಣೆಯಲ್ಲಿ ಕೂಡ 350ಕ್ಕೂ ಹೆಚ್ಚು ಲೋಕಸಭಾ ಸೀಟ್‌ಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದರು.
Comments
Post a Comment