ಸಚಿವ ಸೋಮಶೇಖರ್ ಗೆ ಖಡಕ್ ತಿರುಗೇಟು ನೀಡಿದ ಕಾಂಗ್ರೆಸ್.! ಕಾಂಗ್ರೆಸ್ ಪ್ರಶ್ನೆಗೆ ತಬ್ಬಿಬ್ಬಾದ ಸಚಿವರು

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಯಲು ಮಾಡಿದ್ದೇ ಕಾಂಗ್ರೆಸ್ ನವರು ಎಂಬ ಆರೋಪ ಮಾಡಿದ್ದ ಸಚಿವ ಎಸ್.ಟಿ. ಸೋಮಶೇಖರ್ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ. ಈ ಕುರಿತು ಟ್ವೀಟರ್ ನಲ್ಲಿ ತಿರುಗೇಟು ನೀಡಿರುವ ಕಾಂಗ್ರೆಸ್, ಸಿಡಿ ಮಾಡಿದ್ದು ಕಾಂಗ್ರೆಸ್‌ನವರೇ, ನಾನೂ ಕಾಂಗ್ರೆಸ್‌ನಲ್ಲಿದ್ದವನೇ ಎಂದಿರುವ ಸಚಿವ ಎಸ್ ಟಿ ಸೋಮಶೇಖರ್ ಅವರೇ. ನೀವೆಷ್ಟು ಸಿಡಿ ಮಾಡಿದ್ದೀರಿ? ನಿಮ್ಮದೆಷ್ಟು ಸಿಡಿ ಇದೆ? ಅದಕ್ಕೆಷ್ಟು ಖರ್ಚು ಮಾಡಿದ್ದೀರಿ? ಬಾಂಬೆಯ ಹೋಟೆಲ್‌ನಲ್ಲಿ ಕ್ವಾರೆಂಟೈನ್ ಆಗಿದ್ದಿರಲ್ಲ ಆಗ ನಿಮ್ಮ ಸಿಡಿ ಯಾರು ಮಾಡಿದ್ದು? ಕೋರ್ಟಿಗೆ ಅರ್ಜಿ ಏಕೆ ಸಲ್ಲಿಸಿದಿರಿ? ಎಂದು ಪ್ರಶ್ನಿಸಿದೆ.

ಕಾಂಗ್ರೆಸ್ ಮೇಲೆ ಆರೋಪಿಸುವ ಸೋಮಶೇಖರ್ ಅವರೇ ನಿಮ್ಮ ಕಳ್ಳ ಮನಸೇಕೆ ಹುಳ್ಳುಳ್ಳಗೆ ಆಡುತ್ತಿದೆ? ಹೆಗಲು ಮುಟ್ಟಿ ನೋಡಿಕೊಂಡವರಂತೆ ಓಡಿ ಹೋಗಿ ತಡೆಯಾಜ್ಞೆ ಅರ್ಜಿ ಏಕೆ ಸಲ್ಲಿಸಿದಿರಿ? ಮನೆಹಾಳು ಕೆಲಸ ಯಾರು ಮಾಡುವವರು ಎನ್ನುವುದನ್ನು ಬಸನಗೌಡಪಾಟೀಲ್ ಯತ್ನಾಳ್ ಅವರಲ್ಲಿ ವಿಚಾರಿಸಿ, ಹೇಳುತ್ತಾರೆ. ಬಿ.ವೈ ವಿಜಯೇಂದ್ರ ಅವರು ಸಿಡಿ ತಯಾರಿಕಾ ಘಟಕವನ್ನು ಹೊಂದಿರುವ ಬಗ್ಗೆ ಗಂಟಾಘೋಷವಾಗಿ ಹೇಳಿದ್ದಾರೆ. ಬ್ಲಾಕ್ಮೇಲ್ ಜನತಾ ಪಾರ್ಟಿ ಎಂದು ನಿಮ್ಮವರೇ ಸಾರಿ ಸಾರಿ ಹೇಳಿದ್ದಾರೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.

Comments