ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ರೆಡಿಯಾದ ಮರಿ ಹುಲಿ ಬಿ ವೈ ವಿಜಯೆಂದ್ರ.? ಯಾವ ಕ್ಷೇತ್ರದಿಂದ ಗೊತ್ತಾ.!

ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿರುವ ದಿನಾಂಕವನ್ನು ಈಗಾಗಲೇ ರಾಜ್ಯ ಚುನಾವಣಾ ಆಯೋಗ ಈಗಾಗಲೇ ಘೋಷಿಸಿದೆ. ಈ ನಡುವೆ ಎಲ್ಲಾ ರಾಜಕೀಯ ಪಕ್ಷಗಳ ತಯಾರಿ ಜೋರಾಗಿದೆ. ಆಡಳಿತ ಪಕ್ಷ ಬಿಜೆಪಿ ಹಾಗೂ ಕಾಂಗ್ರೆಸ್ ಮತ್ತು ಜೆಡಿಎಸ್ ಒಳಗೊಂಡಂತೆ ಎಲ್ಲಾ ಪಕ್ಷಗಳು ತಮ್ಮ ಕಾರ್ಯದಲ್ಲಿ ನಿರತವಾಗಿದೆ.


ರಾಜಕೀಯ ಪಕ್ಷಗಳ ಈ ಭರ್ಜರಿ ತಯಾರಿ ನಡುವೆ ಮತ್ತೊಂದು ಹೊಸ ವಿಷಯ ಹೊರಬಿದ್ದಿದೆ.  ಈಗಾಗಲೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರಗಳ ಉಸ್ತುವಾರಿಯನ್ನು ಹೊತ್ತು ಭರ್ಜರಿ ಗೆಲುವಿಗೆ ಕಾರಣವಾಗಿರುವ ಬಿ ವೈ ವಿಜಯೇಂದ್ರ ಈ ಬಾರಿ ಬಸವ ಕಲ್ಯಾಣದಲ್ಲಿ ಆಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿರುವ ಮಾತು. ಒಟ್ಟಾರೆಯಾಗಿ ಚುನಾವಣೆಯಲ್ಲಿ ಬಿ ವೈ ವಿಜಯೇಂದ್ರ ಸ್ಪರ್ಧಿಸುವುದು ನಿಜವಾದರೆ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಮತ್ತಷ್ಟು ಹೆಚ್ಚಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.

Comments