ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ವಿಧಾನಸಭೆಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಗೆಲುವಿಗಾಗಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ.
ಗೆಲುವನ್ನೇ ಮಾನದಂಡವನ್ನಾಗಿರಿಸಿಕೊಂಡು ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುತ್ತಿದ್ದು, ಈ ರೀತಿ ತಮಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಇಬ್ಬರು ಹಾಲಿ ಶಾಸಕರು ಪಕ್ಷ ತೊರೆದಿದ್ದಾರೆ. ಅಸ್ಸಾಂ ಆಡಳಿತರೂಢ ಬಿಜೆಪಿಯ ಶಾಸಕರಾದ ದಿಲೀಪ್ ಕುಮಾರ್ ಹಾಗೂ ಶೀಲಾದಿತ್ಯ ದೇವ್ ಅವರುಗಳಿಗೆ ಟಿಕೆಟ್ ನಿರಾಕರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರು ಶಾಸಕರು ಪಕ್ಷ ತೊರೆದು ಪಕ್ಷೇತರರಾಗಿ ಅಥವಾ ಮತ್ತೊಂದು ಪಕ್ಷದಿಂದ ಚುನಾವಣೆಗೆ ನಿಲ್ಲುವ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.
Comments
Post a Comment