ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೊರೊನಾ ವೈರಸ್‌ಗೆ ಲಸಿಕೆ ಬಂದಿದೆ, ಆದರೆ ಬಿಜೆಪಿ ಸರ್ಕಾರಕ್ಕೆ ತಗುಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು? ಎಂದು ಪ್ರಶ್ನಿಸಿದ್ದಾರೆ.
ಕೊರೊನಾ ಮೊದಲ ಅಲೆಯ ನಿಯಂತ್ರಣದಲ್ಲಿನ ಲೋಪ-ದೋಷವನ್ನು ಎರಡನೇ ಅಲೆಯಲ್ಲಿಯಾದರೂ ತಿದ್ದಿಕೊಂಡು, ಕೊರೊನಾವನ್ನು ಭ್ರಷ್ಟಾಚಾರಕ್ಕೆ ದುರ್ಬಳಕೆ ಮಾಡಿಕೊಳ್ಳದೆ ಕೆಲಸ ಮಾಡಿ ಜನರನ್ನು ಉಳಿಸಿ. ಕೊರೊನಾ ನಿರ್ವಹಣೆಗಾಗಿ ರೂ.5,372 ಕೋಟಿ ಖರ್ಚು ಮಾಡಲಾಗಿದೆ ಎಂದು ಮೊನ್ನೆ ಮಂಡಿಸಿದ್ದ ಬಜೆಟ್ ನಲ್ಲಿ ಹೇಳಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಖರ್ಚಿನ ವಿವರ ಮಾತ್ರ ತಿಳಿಸಿಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಈಗಲಾದರೂ ಆ ಹಣ ಯಾವ ಉದ್ದೇಶಗಳಿಗೆ ಖರ್ಚು ಮಾಡಿದ್ದೀರಿ ಎಂಬ ಲೆಕ್ಕದ ವಿವರವನ್ನು ಜನರ ಮುಂದಿಡಿ. ಕೊರೊನಾ ನಿಯಂತ್ರಣಕ್ಕಾಗಿ ಸಂಪನ್ಮೂಲ ವ್ಯಯಮಾಡಬೇಕಾಗಿದೆ ಎಂಬ ಕುಂಟುನೆಪ ಹೇಳಿ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನಗಳನ್ನು ಕಡಿತಗೊಳಿಸಿದ ಸಿಎಂ ಈಗ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.
ಕೊರೊನಾ ವೈರಸ್‌ಗೆ
— Siddaramaiah (@siddaramaiah) March 19, 2021
ಲಸಿಕೆ ಬಂದಿದೆ,
ನಿಮ್ಮ ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು?
ಕೊರೊನಾ ಮೊದಲ ಅಲೆಯ ನಿಯಂತ್ರಣದಲ್ಲಿನ ಲೋಪ-ದೋಷವನ್ನು ಎರಡನೇ ಅಲೆಯಲ್ಲಿಯಾದರೂ ತಿದ್ದಿಕೊಂಡು, ಕೊರೊನಾವನ್ನು ಭ್ರಷ್ಟಾಚಾರಕ್ಕೆ ದುರ್ಬಳಕೆ ಮಾಡಿಕೊಳ್ಳದೆ ಕೆಲಸ ಮಾಡಿ ಜನರನ್ನು ಉಳಿಸಿ.
4/4#coronavirus
Comments
Post a Comment