ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಎಲ್ಲಾ ಪಕ್ಷಗಳು ಆಬ್ಬರದ ಚುನಾವಣಾ ಪ್ರಚಾರ ಕಾರ್ಯವನ್ನು ಆರಂಭಿಸಿವೆ. ಆರೋಪ ಹಾಗೂ ಪ್ರತ್ಯಾರೋಪಗಳ ನಡುವೆ ಚುನಾವಣಾ ರಾಜಕೀಯ ಎತ್ತ ಸಾಗುತ್ತಿದೆ ಎಂಬುದು ಒಂದು ಕಎಯ ಪ್ರಶ್ನೆಯಾದರೆ. ಹಣ , ಜಾತಿ ಹಾಗೂ ಇನ್ನಿತರ ಶಕ್ತಿಗಳ ಮೂಲಕ ಚುನಾವಣೆ ಗೆಲ್ಲಲು ಸಿದ್ದವಾಗಿರುವುದು ಮತ್ತೊಂದು ತಂತ್ರ. ಒಟ್ಟಾರೆಯಾಗಿ ಚುನಾವಣಾ ತಂತ್ರಗಾರಿಕೆ ಮತ್ತೊಂದು ಕಡೆ ಸಾಗುತ್ತಿರುವುದು ಮಾತ್ರ ಸುಳ್ಳಲ್ಲ.
ಒಂದು ಕಡೆ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಈಗಾಗಲೇ ಪ್ರಬಲ ಪೈಪೋಟಿ ಆರಂಭವಾಗಿದೆ. ಎಲ್ಲಾ ಪಕ್ಷಗಳು ತಮ್ಮ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಈ ನಡುವೆ ಭಾರೀ ಸಂಚಲನ ಸೃಷ್ಟಿಸುವ ಹೇಳಿಕೆಯನ್ನು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಭಾರೀ ಜನ ಬೆಂಬಲದೊಂದಿಗೆ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕರು ಈ ಚುನಾವಣೆಯನ್ನು ಗೆಲ್ಲಲೇ ಬೇಕು ಎಂಬ ಉತ್ಸಾಹದಲ್ಲಿದ್ದಾರೆ.
ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದ ಡಿ.ಕೆ ಶಿವಕುಮಾರ್ ಬಿಜೆಪಿ ತನ್ನ ಆಧಿಕಾರದ ಗದ್ದುಗೆಯನ್ನು ಬಳಸಿಕೊಂಡು ಹಣ ಹಂಚುವ ಕೆಲಸ ಮಾಡಿ ಚುನಾವಣೆಯನ್ನು ಗೆಲ್ಲುವ ಪ್ರಯತ್ನ ನಡೆಸುತ್ತಿದೆ ಇದು ಚುನಾವಣೆಯ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಎಂದು ಹೇಳಿದರು. ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ಆಭೂತಪೂರ್ವ ಬೆಂಬಲ ದೊರಕುತ್ತಿದ್ದು, ಈ ಮೂಲಕ ಕಾಂಗ್ರೆಸ್ ಉಪಚುನಾವಣೆಯಲ್ಲಿ ಗೆಲುವು ಬಹುತೇಕ ಖಚಿತ ಎಂದು ಹೇಳಿದರು.
Comments
Post a Comment