ರಾಜೀನಾಮೆ ಕೊಟ್ಟು ಹೊರಗೆ ಹೋಗಿ ಎಂದು ಖಡಕ್ ಆಗಿ ತಿರುಗೇಟು ನೀಡಿದ ಕರ್ನಾಟಕದ ಪ್ರಭಾವಿ ಸಚಿವರು

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿರುವುದು ನಿಮಗೆಲ್ಲ ತಿಳಿದಿರುವ ವಿಷಯ. ಮಾತ್ರವಲ್ಲದೆ ಈ ಘಟನೆ ಎಲ್ಲಿಗೆ ಹೋಗಿ ತಲುಪಲಿದೆ ಎಂಬುದು ಹೇಳುವುದು ಕೂಡ ಕಷ್ಟ. ಈ ಎಲ್ಲಾ ಬೆಳವಣಿಗೆಗಳು ರಾಜಕೀಯವಾಗಿ ಹಾಗೂ ಆಡಳಿತಾತ್ಮಕವಾಗಿ ಮುಜುಗರ ಉಂಟು ಮಾಡುವಂತಿದೆ. ಮಾತ್ರವಲ್ಲದೆ ಈ ಬಗ್ಗೆ ರಾಜ್ಯ ಬಿಜೆಪಿಯ ಉಸ್ತುವಾರಿ ಹಾಗೂ ದೆಹಲಿಯ ವರಿಷ್ಠರು ಗಮನ ಹರಿಸಿದ್ದು ಶೀಘ್ರವಾಗಿ ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿದೆ.

ಈಶ್ವರಪ್ಪನವರು ರಾಜ್ಯ ಸರ್ಕಾರದ ವಿರುದ್ದವಾಗಿ ಗುಪ್ತವಾಗಿ ರಾಜ್ಯಪಾಲರಿಗೆ ದೂರು ನೀಡಿದರೆ. ಬಿಜೆಪಿಯ ಹಿರಿಯ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಪದೇ ಪದೇ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಈ ಹೇಳಿಕೆಗಳು ಬಿಜೆಪಿ ಪಕ್ಷಕ್ಕೆ ಬಹಳಷ್ಟು ಮುಜುಗರ ಉಂಟುಮಾಡಿದೆ. ಸದ್ಯ ಇದರ ಬೆಳವಣಿಗೆಗಳು ಉಪಚುನಾವಣೆಯಲ್ಲಿ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಬಸನ ಗೌಡ ಪಾಟೀಲ್ ಯತ್ನಾಳ್ ಅವರ ಈ ಹೇಳಿಕೆಗಳ ಬಗ್ಗೆ ಈಗಾಗಲೇ ಹಲವಾರು ಸಚಿವರು ಬೇಸರ ವ್ಯಕ್ತಪಡಿಸಿದ್ದು ಈಗಾಗಲೇ ಹಲವಾರು ಪ್ರತ್ತಿಕ್ರಿಯೆಗಳನ್ನು ನೀಡಿದ್ದಾರೆ. ಸದ್ಯ ಕರ್ನಾಟಕ ರಾಜ್ಯ ಗಣಿ ಮತ್ತು ಭೂ ವಿಜ್ಣಾನ ಸಚಿವ ಮುರುಗೇಶ್ ನಿರಾಣಿ ಬಸನ ಗೌಡ ಪಾಟೀಲ್ ಗೆ ಖಡಕ್ ಎಚ್ಚರಿಕೆ ನೀಡಿದ್ದು, ನಿಮಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಹೊರಗೆ ಹೋಗಿ ಬಳಿಕ ಟೀಕೆ ಮಾಡಿ ಎಂದು ಪ್ರಯತಿಕ್ರಿಯೆ ನೀಡಿದ್ದಾರೆ.

Comments