ಬಿಗ್ ನ್ಯೂಸ್: ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ ಸಿದ್ದರಾಮಯ್ಯರ ಆ ಒಂದು ಸುದ್ದಿ, ಬಿಜೆಪಿ,ಜೆಡಿಎಸ್ ಪಕ್ಷದಲ್ಲಿ ತಳಮಳ
ರಾಜಕೀಯ ಎಂದರೆ ಕುತೂಹಲಕಾರಿ ಸುದ್ದಿಗಳ ತಾಣ ಎಂದು ಹೇಳಿದರೆ ತಪ್ಪಗಲಾರದು. ಯಾವ ಕ್ಷಣಕ್ಕೀ ಯಾವ ಬ್ರೇಕಿಂಗ್ ಸುದ್ದಿಗಳು ಹೊರಬರುತ್ತವೇ ಎಂದು ಹೇಳಲು ಸಾಧ್ಯವಾಗದು. ರಾಜಕೀಯವಾಗಿ ದೂರು ಪ್ರತಿದೂರಿನ ನಡುವೆ ಈ ಎಲ್ಲಾ ರಾಜಕೀಯ ಅಂಶಗಳು ಸಾಮಾನ್ಯ ಎಂಬುದು ರಾಜಕೀಯ ಪಂಡಿತರ ಲೆಕ್ಕಾಚಾರ. ಸದ್ಯ ರಾಜ್ಯದಲ್ಲಿ ಉಪಚುನಾವಣೆಯ ಸದ್ದು ಗದ್ದಲ ಜೋರಾಗಿದ್ದರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಕುರಿತಾದ ಒಂದು ಸುದ್ದಿ ಭಾರೀ ಸಂಚಲನ ಸೃಷ್ಟಿಸುತ್ತಿದೆ.
ಅಹಿಂದ ವರ್ಗದ ನಾಯಕ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಕ್ಷೇತ್ರದ ಆಯ್ಕೆಯ ಬಗ್ಗೆ ಭಾರೀ ಸುದ್ದಿಯಾಗುತ್ತಿದೆ. ಈ ಮೂಲಕ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ನಾಯಕರಲ್ಲಿ ಸಂಚಲನ ಸೃಷ್ಟಿಯಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಯಶಸ್ವಿ ಐದು ವರ್ಷಗಳ ಕಾಲ ಅಧಿಕಾರ ನಡೆಸಿದ್ದರು, ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬಹಳ ಹರಸಾಹಸ ಪಟ್ಟು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಕೊನೆಗೆ ಅಂತಿಮವಾಗಿ ಬಾದಾಮಿ ಕ್ಷೇತ್ರವೂ ಸಿದ್ದರಾಮಯ್ಯನವರ ಕೈ ಹಿಡಿಯಿತು.
ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರ ಗೆಲುವು ತುಸು ಕಷ್ಟವಾಗಿತ್ತು. ಈ ಸೋಲು ಸಿದ್ದರಾಮಯ್ಯನವರನ್ನು ಬಹಳಷ್ಟು ಕಂಗೆಡಿಸಿತ್ತು ಎಂದು ಹೇಳಲಾಗುತ್ತಿದೆ. ಮಾತ್ರವಲ್ಲದೆ ಮುಂದಿನ ವಿಧಾನಸಭಾ ಚುನಾವಣೆಗೆ ಯಾವ ಕ್ಷೇತ್ರವೂ ಆಯ್ಕೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಚರ್ಚೆಗಳು ಆರಂಭವಾಗುತ್ತಿವೆ ಈ ನಡುವೆ ಯಾವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿಯೊಂದು ಹೊರಬಿದ್ದಿದ್ದು ಒಂದು ಮೂಲಗಳ ಪ್ರಕಾರ ಕೋಲಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದಕ್ಕಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಶತ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
Comments
Post a Comment