ದೇಶದಲ್ಲಿ ಅದ್ಯ ಚುನಾವಣೆಯ ಭರಾಟೆ ಜೋರಾಗಿದೆ. ಸದ್ಯ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಬಹುತೇಕ ಎಲ್ಲಾ ಪಕ್ಷಗಳು ಬ್ಯುಸಿಯಾಗಿರುವ ಸಂಧರ್ಭದಲ್ಲಿ ಕೆಲವೊಂದು ಪಕ್ಷಗಳು ತಮ್ಮ ಆಸ್ತಿತ್ವವನ್ನು ಊಳಿಸಿಕೊಳ್ಳಲು ಪ್ರಯತ್ನಿಸಿದರೆ ಕೆಲವು ಪಕ್ಷಗಳು ತಮ್ಮ ಅಸ್ತಿತ್ವವನ್ನು ಬೆಳೆಸಿಕೊಳ್ಳಲು ಪ್ರಯತ್ನಿಸುತ್ತಿದೆ. ಈ ನಡುವೆ ಭಾರತೀಯ ಜನತಾ ಪಾರ್ಟಿ ಆಸ್ತಿತ್ವವನ್ನು ಬೆಳೆಸಿಕೊಳ್ಳುವುದರ ಜೊತೆಗೆ ಐತಿಹಾಸಿಕ ದಾಖಲೆ ಬರೆಯಲಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿರುವ ಮಾತು.
ಬಿಜೆಪಿ ದಕ್ಷಿಣ ಭಾರತದಲ್ಲಿ ಅಷ್ಟಾಗಿ ತನ್ನ ಪ್ರಭಾವವನ್ನು ಬೀರಲು ಸಾಧ್ಯವಾಗಲಿಲ್ಲ. ಕರ್ನಾಟಕ ಹಾಗೂ ಮಹಾರಾಷ್ಟ್ರವನ್ನು ಹೊರತುಪಡಿಸಿ ದಕ್ಷಿಣ ಭಾರತದ ಬೇರೆ ರಾಜ್ಯಗಳಲ್ಲಿ ಪ್ರಭಾವವನ್ನು ಬೀರಲು ಸಾಧ್ಯವಾಗಿಲ್ಲ. ಈ ಎಲ್ಲಾ ಮಾಹಿತಿಗಳಿಗೆ ವಿಭಿನ್ನ ಎಂಬಂತೆ ಕೇರಳದಲ್ಲಿ ಈ ಬಾರಿ ಬಿಜೆಪಿ ಐತಿಹಾಸಿಕ ದಾಖಲೆ ಮಾಡಲಿದೆ ಎಂದು ಕೇರಳ ಬಿಜೆಪಿ ರಾಜ್ಯಧ್ಯಕ್ಷ ಕೆ. ಸುರೇಂದ್ರನ್ ಹೇಳಿದ್ದಾರೆ.
ಕೇರಳದಲ್ಲಿ ಬಿಜೆಪಿ ಆಸ್ತಿತ್ವವಿಲ್ಲ ಎಂದು ಹೇಳುವ ವಿಪಕ್ಷಗಳೇ ಈ ಬಾರಿ ಕೇರಳದಲ್ಲಿ ಬಿಜೆಪಿ ಕಿಂಗ್ ಅಥವಾ ಕಿಂಗ್ ಮೇಕರ್ ಆಗಲಿದೆ ಎಂದು ಕೇರಳ ಬಿಜೆಪಿಯ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಹೇಳಿದ್ದಾರೆ. ಬಿಜೆಪಿ ಅಷ್ಟಾಗಿ ಪ್ರಭಾವ ಇಲ್ಲದ ಕೇರಳದಲ್ಲಿ ನಿಜವಾಗಿಯೂ ಕಿಂಗ್ ಮೇಕರ್ ಆಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.
Comments
Post a Comment