ಬೆಳಗಾವಿ ಎಂದರೆ ಅದು ಜಾರಕಿಹೊಳಿ ಕುಟುಂಬದ ತವರು ಕ್ಷೇತ್ರ. ರಾಜಕೀಯದಲ್ಲಿ ಸಕ್ರೀಯರಾಗಿರುವ ಜಾರಕಿಹೊಳಿ ಬ್ರದರ್ಸ್, ಎಲ್ಲಾ ರಾಜಕೀಯ ಪಕ್ಷದಲ್ಲೂ ಬಹುತೇಕ ಗುರುತಿಸಿಕೊಂಡಿದ್ದಾರೆ. ಸದ್ಯ ಮಾಜಿ ಸಚಿವ ರಮೇಶ್ ಜಾರಕೊಹೊಳಿ ಹಾಗೂ ಅವರ ಸಹೋದರ ಬಾಲಚಂದ್ರ ಜಾರಕೊಹೊಳಿ ಬಿಜೆಪಿಯಲ್ಲಿ ಗುರುತಿಸಿಕೊಂಡರೆ ಅವರ ಮತ್ತಿಬ್ಬರು ಸಹೋದರರಾದ ಸತೀಶ್ ಜಾರಕಿಹೊಳಿ ಹಾಗೂ ಲಖಾನ್ ಜಾರಕೊಹೊಳಿ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದಾರೆ. ಸದ್ಯ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಆಭ್ಯರ್ಥಿಯಾಗಿರುವ ಸತೀಶ್ ಜಾರಕಿಹೊಳಿ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದರೆ. ಈ ನಡುವೆ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಲಖಾನ್ ಜಾರಕೊಹೊಳಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ರ ರಾಜೀನಾಮೆ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಲಖಾನ್, ಈ ಸಿಡಿ ಪ್ರಕರಣವನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿ ಡಿ.ಕೆ ಶಿವಕುಮಾರ್ ರಾಜೀನಾಮೆ ನೀಡಲು ಆದೇಶಿಸಬೇಕು ಇಲ್ಲವಾದಲ್ಲಿ ಉಪಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಮೇಲೆ ವ್ಯತಿರಿಕ್ತ ಪರಿಣಾಮ ಬೀಳಲಿದೆ ಎಂದು ಹೇಳಿದರು. ಮೆಲ್ನೋಟಕ್ಕೆ ಗಮನಿಸಿದಾಗ ಸಂತ್ರಸ್ತ ಯುವತಿಯ ತಂದೆ ತಾಯಿ ಮಾಡುತ್ತಿರುವ ಆರೋಪ ಕೇಳಿದರೆ ಸತ್ಯ ಎಂದೆನಿಸುತ್ತದೆ. ಈ ಕಾರಣದಿಂದಾಗಿ ಡಿ.ಕೆ ಶಿವಕುಮಾರ್ ಅವರು ರಾಜೀನಾಮೆ ನೀಡುವುದು ಒಳಿತು ಎಂದು ಹೇಳಿದ್ದಾರೆ.
Comments
Post a Comment