ಮತ್ತೊಂದು ಸಂಚಲನ ಸೃಷ್ಟಿಸುವ ಹೇಳಿಕೆ ನೀಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್.! ಸಿದ್ದರಾಮಯ್ಯ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್

ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಘಟನೆಗಳು ಹಾಗೂ ಹೇಳಿಕೆಗಳು ಹೊರಬೀಳುವುದು ಸರ್ವೇ ಸಾಮಾನ್ಯವಾಗಿದೆ. ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವೆ ಜಟಾಪಟಿಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸದ್ಯ ರಾಜ್ಯ ರಾಜಕೀಯದಲ್ಲಿ ಆಚ್ಚರಿಯ ಸುದ್ದಿಯೊಂದು ಹೊರಬಿದ್ದಿದೆ.  ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲಿದೆಯೇ.? ಎಂಬ ಪ್ರಶ್ನೆಗಳು ಆರಂಭವಾಗಿದೆ.

ಹೌದು, ಈ ಪ್ರಶ್ನೆ ಮೂಡಲು ಪ್ರಮುಖ ಕಾರಣ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ನೀಡಿದ ಆ ಒಂದು ಹೇಳಿಕೆ. ಸಿದ್ದರಾಮಯ್ಯನವರು ಈ ರಾಜ್ಯದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಬಹುದು. ಹಲವಾರು ಜಪರ ಯೋಜನೆಗಳನ್ನು ಜಾರಿಗೆ ತಂದಿರುವ ಸಿದ್ದರಾಮ್ಯನವರಿಗೆ ಜನರ ಆಶೀರ್ವಾದವಿದ್ದರೆ ಮತ್ತೊಮ್ಮೆ ಮುಖ್ಯಮಂತ್ರಿಯಾಗಬಹುದು ಎಂದು ಹೇಳಿದ್ದಾರೆ.

ಡಾ.ರಾಮನೋಹರ ಲೋಹಿಯಾ ಸಮತಾ ವಿದ್ಯಾಲಯ ಹಾಗೂ ಕನಾಟಕ ಗಾಂಧಿ ಸ್ಮಾರಕ ನಿಧಿ ಆಯೋಜಿಸಿದ್ದ ಪುಸ್ತಕ ಲೋಕಾರ್ಪಣೆ ಸಮಾರಂಭದಲ್ಲಿ ಈ ಮಾತನ್ನು ಹೇಳಿದ ರಮೇಶ್ ಕುಮಾರ್. ಸಿದ್ದರಾಮಯ್ಯನವರನ್ನು ಮಾಜಿ ಮುಖ್ಯಮಂತ್ರಿ ಎಂದು ಕರೆಯುವಾಗ ಕೇಳಲು ಬೇಸರವಾಗುತ್ತದೆ ಎಂದು ಹೇಳಿದರು.

Comments