ರಾಜ್ಯ ಬಿಜೆಪಿ ಪಕ್ಷದಿಂದ ಪ್ರಭಾವಿ ಶಾಸಕನ ಉಚ್ಚಾಟನೆಗೆ ನಿರ್ಧಾರಿಸಿದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್.?

ರಾಜ್ಯ ಬಿಜೆಪಿಯಲ್ಲಿ ದಿನಕ್ಕೊಂದಿ ಬೆಳವಣಿಗೆಗಳು ನಡೆಯುತ್ತಿದೆ. ಈ ನಡುವೆ ಹೈಕಮಾಂಡ್ ಕೂಡ ರಾಜ್ಯ ಬಿಜೆಪಿ ನಾಯಕರಿಗೆ ಮೂಗುದಾರ ಹಾಕಲು ನಿರ್ಧಾರಿಸಿದ್ದು ಅದಕ್ಕಾಗಿ ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಬಿಜೆಪಿ ಹೈಕಮಾಂಡ್ ಕಳುಹಿಸಿಕೊಟ್ಟಿದೆ. ಅರುಣ್ ಸಿಂಗ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು ಈಶ್ವರಪ್ಪ ಹಾಗೂ ಯಡಿಯೂರಪ್ಪ ನಡುವಿನ ಮನಸ್ತಾಪ ದೂರವಾಗಿದೆ ಎಂದರು. ಈ ಎಲ್ಲಾ ಬೆಳವಣಿಗೆಗಳ ಬಳಿಕ ಮತ್ತೊಂದು ಖಡಕ್ ನಿರ್ಧಾರ ಕೈಗೊಳ್ಳುವ ಎಲ್ಲಾ ಮುನ್ಸೂಚನೆ ಕಾಣುತ್ತಿದೆ.

ರಾಜ್ಯ ಬಿಜೆಪಿಯ ನಾಯಕ ಹಾಗೂ ಹಾಲಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ರಾಜ್ಯದ ಮುಖ್ಯಮಂತ್ರಿ ಹಾಗೂ ಬಿಜೆಪಿ ಸರ್ಕಾರದ ಬಗ್ಗೆ ಭಾರೀ ಟೀಕೆ ಮಾಡುತ್ತಿದ್ದು ಇದು ವಿಪಕ್ಷ ಕಾಂಗ್ರೆಸ್ ಗೆ ಆಹಾರವಾಗಿ ಪರಿಣಮಿಸಿದೆ. ಈ ಎಲ್ಲಾ ಬೆಳವಣಿಗೆಗಳನ್ನು ತಪ್ಪಿಸಲು ಮಹತ್ವದ ಪ್ಲಾನ್ ಗೆ ರಾಜ್ಯ ಉಸ್ತುವಾರಿಗಳು ನಿರ್ಧಾರಿಸಿದ್ದಾರೆ ಎನ್ನಲಾಗುತ್ತಿದೆ.

ಯತ್ನಾಳ್ ಅವರ ಮಾತಿನಿಂದಾಗಿ ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಮುಜುಗರ ಉಂಟಾಗುತ್ತಿದೆ. ಮಾತ್ರವಲ್ಲದೆ ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ನಾನು ಹೆಚ್ಚು ಮಾತನಾಡಿದರೆ ಆ ವ್ಯಕ್ತಿಗೆ ಪ್ರಚಾರ ಕೊಟ್ಟಂತಾಗುತ್ತದೆ ಎಂದು ಹೇಳಿದರು. ಈ ಎಲ್ಲಾ ಬೆಳವಣಿಗಳಿಂದಾಗಿ ಸದ್ಯದಲ್ಲಿಯೇ ಕಠಿಣ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ಎಲ್ಲಾ ಮಾಹಿತಿಗಳ ಪ್ರಕಾರ ಯತ್ನಾಳ್ ಅವರನ್ನು ಸದ್ಯದಲ್ಲಿಯೇ ಉಚ್ಚಾಟಿಸುವ ಎಲ್ಲಾ ಲಕ್ಷಣಗಳಿವೆ ಎಂದು ಹೇಳಲಾಗುತ್ತಿದೆ.

Comments