ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಬಿಗ್ ಶಾಕ್, ಸತತ ಗೆಲುವಿನ ನಡುವೆ ಒಂದು ಹೀನಾಯ ಸೋಲು

ಬಿ.ಎಸ್ ಯಡಿಯೂರಪ್ಪ ರಾಜ್ಯ ರಾಜಕೀಯದ ಮುತ್ಸದ್ದಿ ನಾಯಕ. ಕರ್ನಾಟಕ ಅಥವಾ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಯತ್ನಿಸಿದ್ದ ಪ್ರಮುಖ ಹಾಗೂ ಪ್ರಭಾವಿ ನಾಯಕ. ಲಿಂಗಾಯಿತ ಸಮುದಾಯದಲ್ಲಿ ಗುರುತಿಸಿಕೊಂಡಿರುವ ಯಡಿಯೂರಪ್ಪನವರು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ರಾಜಾಹುಲಿ ಎಂಬ ಹೆಸರನ್ನು ಗಳಿಸಿದ್ದಾರೆ. ಸುಮಾರು ನಾಲ್ಕು ಬಾರಿ ಮುಖ್ಯಮಂತ್ರಿ ಹುದ್ದೆಯನ್ನು ಆಲಂಕರಿಸಿರುವ ಯಡಿಯೂರಪ್ಪ. ಸದ್ಯ ಕರ್ನಾಟಕ ರಾಜ್ಯದ ಹಾಲಿ ಮುಖ್ಯಮಂತ್ರಿ, ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯನ್ನು ಆಲಂಕರಿಸಿದ ಬಳಿಕ ಸಾಲು ಸಾಲು ಸವಾಲುಗಳನ್ನು ಎದುರಿಸುತ್ತಿರುವ ಯಡಿಯೂರಪ್ಪ ಸದ್ಯ ಒಂದು ಹೀನಾಯ ಸೋಲನ್ನು ಎದುರಿಸಿದ್ದಾರೆ.

ರಾಜ್ಯದಲ್ಲಿ ಕಳೆದ ತಿಂಗಳಿನಲ್ಲಿ ಸಾಲು ಸಾಲು ಚುನಾವಣೆಗಳನ್ನು ಎದುರಿಸಿತ್ತು ಅದೇ ರೀತಿ ಮುಖ್ಯಮಂತ್ರಿಯವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿತ್ತು, ಬಿಜೆಪಿಯ ಪ್ರಭಾವಿ ನಾಯಕರಾದ ಬಿ.ವೈ ರಾಘವೇಂದ್ರ, ಸಚಿವ ಈಶ್ವರಪ್ಪ ಇನ್ನಿತರು ನಾಯಕರು ಪ್ರಚಾರದಲ್ಲಿ ಭಾಗಿಯಾಗಿದ್ದರು ಅದರೆ ಸದ್ಯ ಫಲಿತಾಂಶವನ್ನು ನೋಡಿದ ಬಿಜೆಪಿ ನಾಯಕರಿಗೆ ಶಾಕ್ ಎದುರಾಗಿದೆ. ಹೌದು, ಸುಮಾರು 35 ನಗರ ಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲಾಗಿದೆ.

ಶಿವಮೊಗ್ಗದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 18 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದರೆ, 11 ಸ್ಥಾನಗಳಲ್ಲಿ ಜೆಡಿಎಸ್ ಪಕ್ಷ ಗೆಲುವು ಸಾಧಿಸಿದೆ ಮತ್ತು ಕೇವಲ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಶಿವಮೊಗ್ಗದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ಖಚಿತ ಎಂದುಕೊಂಡಿದ್ದ ನಾಯಕರಿಗೆ ಬಿಗ್ ಶಾಕ್ ಎದುರಾಗಿದೆ.

Comments