ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಮಹತ್ವದ ಮಾಹಿತಿ ನೀಡಿದ ಬಿ.ವೈ ವಿಜಯೇಂದ್ರ

ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿಯ ಬದಲಾವಣೆಯಾಗಲಿದೆ ಎಂಬ ಮಾತುಗಳು ಕಳೆದ ಆರು ತಿಂಗಳಿನಿಂದ ಕೇಳಿ ಬರುತ್ತಿರುವ ಮಾತು ಇದಕ್ಕೆ ಪ್ರಮುಖ ಕಾರಣ ವಯಸ್ಸು. ಯಡಿಯೂರಪ್ಪನವರಿಗೆ ವಯಸ್ಸಾಯಿತು ಎಂಬ ಕಾರಣಕ್ಕೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಬೇಕು ಎಂಬ ಚರ್ಚೆಗಳು ಆರಂಭವಾಗಿತ್ತು. ಕರ್ನಾಟಕ ಬಿಜೆಪಿಯ ಕೆಲ ಶಾಸಕರು ಕೂಡ ಇದರ ಬಗ್ಗೆ ಬಹಿರಂಗ ಹೇಳಿಕೆಯನ್ನು ನೀಡಿದ್ದರು.

ಬಿಜೆಪಿ ಹೈಕಮಾಂಡ್ ನ ಅಲಿಖಿತ ನಿಯಮದ ಪ್ರಕಾರ 75 ವರ್ಷ ದಾಟಿದ ಯಾವುದೇ ವ್ಯಕ್ತಿ ಮುಖ್ಯಮಂತ್ರಿಯಂತಹ ಉನ್ನತ ಹುದ್ದೆಯನ್ನು ಆಲಂಕರಿಸುವಂತಿಲ್ಲ ಎಂಬುದು ನಿಯಮ. ಅದರೆ ಕರ್ನಾಟಕದಲ್ಲಿ ಈ ನಿಯಮ ಪಾಲನೆಯಾಗಿಲ್ಲ ಎಂಬುದು ಬಿಜೆಪಿ ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿತ್ತು ಅದರೆ ಅದಕ್ಕೆ ಕಾರಣ ನೂರಾರು. ಆದರೆ ಸದ್ಯ ಮತ್ತೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆಯಾಗುತ್ತಿದೆ ಹಾಗೂ ಕೆಲವು ಸುದ್ದಿಗಳು ಹರಿದಾಡುತ್ತಿದೆ. ರಾಜ್ಯದಲ್ಲಿ ಹರಿದಾಡುತ್ತಿರುವ ಸುದ್ದಿಯ ಬಗ್ಗೆ ಮುಖ್ಯಮಂತ್ರಿಗಳ ಪುತ್ರ ಬಿ.ವೈ ವಿಜಯೇಂದ್ರ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಮಾತನಾಡಿರುವ ವಿಜಯೇಂದ್ರ ಅಂತಹ ಯಾವುದೇ ಸುದ್ದಿಗಳಿಲ್ಲ ಸದ್ಯ ಹರಿದಾಡುತ್ತಿರುವ ಸುದ್ದಿ ಕೇವಲ ಊಹಾಪೋಹಗಳ ಸುದ್ದಿ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಒಟ್ಟಾರೆಯಾಗಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

Comments