ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗುವ ಘಟನೆಗಳು ನಡೆಯುತ್ತಿದೆ. ಕರೋನಾ ಹಾಗೂ ವಯಸ್ಸಿನ ಕಾರಣದಿಂದಾಗಿ ಯಡಿಯೂರಪ್ಪನವರನ್ನು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಮಾತುಗಳು ಕೇಳಿ ಬರುತ್ತಿವೆ ಎಂದು ಕನ್ನಡದ ಪ್ರಖ್ಯಾತ ದೃಶ್ಯ ಮಾಧ್ಯಮಗಳು ವರದಿ ಮಾಡಿವೆ. ಕರ್ನಾಟಕ ರಾಜಕೀಯದಲ್ಲಿ ಈ ರೀತಿಯ ಬದಲಾವಣೆಯ ಸುದ್ದಿ ಕಳೆದ ಕೆಲವು ತಿಂಗಳುಗಳಿಂದ ಹರಿದಾಡುತ್ತಿರುವುದು ಮಾತ್ರ ಸುಳ್ಳಲ್ಲ ಅದರೆ ಬಿಜೆಪಿ ಹೈಕಮಾಂಡ್ ಅಥವಾ ಉನ್ನತ ಮಟ್ಟದ ನಾಯಕರು ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆಗಳ ಸುದ್ದಿ ಕೇಳಿ ಬರುತ್ತಿದ್ದಂತೆ ಯಡಿಯೂರಪ್ಪ ಕಾರ್ಯಕರ್ತರು ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಕರ್ನಾಟಕದಲ್ಲಿ ಯಡಿಯೂರಪ್ಪನವರ ಹೆಸರಿಲ್ಲದೆ ಒಂದು ಸ್ಥಾನವನ್ನು ಗಳಿಸಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿ ಸ್ಥಾನವನ್ನು ಆಲಂಕರಿಸಿರುವ ಬಿಎಸ್.ವೈ ತಮ್ಮ ಜನಪ್ರಿಯ ಯೋಜನೆಗಳ ಮೂಲಕ ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಗೆ ಪಾತ್ರರಾಗಿದ್ದಾರೆ. ಕರ್ನಾಟಕದಲ್ಲಿ ಯಡಿಯೂರಪ್ಪನವರ ಸಮವಾಗಿ ನಿಲ್ಲುವ ಯಾವುದೇ ನಾಯಕನಿಲ್ಲ ಎಂಬುದು ಕರ್ನಾಟಕದ ರಾಜಕೀಯ ಇತಿಹಾಸ ಬಲ್ಲವರ ಸತ್ಯ.
ಕರ್ನಾಟಕ ರಾಜ್ಯದಲ್ಲಿ ನಿಜವಾಗಿಯೂ ಮುಖ್ಯಮಂತ್ರಿ ಬದಲಾವಣೆಯಾಗಲಿದೆಯಾ ಎಂಬ ಪ್ರಶ್ನೆಗೆ ರಾಜಕೀಯ ನಾಯಕರನ್ನು ಕೇಳಿದಾಗ ದೊರೆತೆ ಉತ್ತರ ವಿಭಿನ್ನ. ಹಾಸನ ಪ್ರಭಾವಿ ಯುವ ನಾಯಕ ಪ್ರೀತಂ ಗೌಡ ಮಾತನಾಡಿದ್ದು ರಾಜ್ಯದಲ್ಲಿ ಯಾವುದೇ ನಾಯಕತ್ವ ಬದಲಾವಣೆಯ ಪ್ರಶ್ನೆ ಇಲ್ಲ. ಮುಂದಿನ ಎರಡು ವರ್ಷಗಳವರೆಗೂ ಯಡಿಯೂರಪ್ಪ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಮಾಧ್ಯಮಗಳಿಗೆ ಈ ರೀತಿಯ ಮಾಹಿತಿಯನ್ನು ಯಾರು ನೀಡುತ್ತಾರೆ ಎಂದು ನನಗೆ ಗೊತ್ತಿಲ್ಲ ಎಂದು ಹೇಳಿದರು. ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಭವಿಷ್ಯದಲ್ಲಿ ಮುಖ್ಯಮಂತ್ರಿಯಾಗುತ್ತಾರೆ ಮತ್ತು ಅವರ ನೇತೃತ್ವದಲ್ಲಿ ಚುನವಾಣೆ ನಡೆದು ಬಿಜೆಪಿ ಯಶಸ್ವಿಯಾಗಲಿದೆ ಎಂದು ಹೇಳಿದರು. ಈ ಎಲ್ಲಾ ಬೆಳವಣೆಗೆಗಳ ನಡುವೆ ಬೆಂಕಿ ಇಲ್ಲದೆ ಹೊಗೆಯಾಡುವುದಿಲ್ಲ ಎಂಬ ಮಾತು ನೆನಪಿಸಿಕೊಳ್ಳಬೇಕಾಗುತ್ತದೆ.
Comments
Post a Comment