ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ ಆರ್.ಎಸ್.ಎಸ್ ನಾಯಕರ ನಡೆ

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗುವ ಎಲ್ಲಾ ಲಕ್ಷಣಗಳು ಕೇಳಿ ಬರುತ್ತಿವೆ. ಈ ನಡುವೆ ಇದಕ್ಕೆ ಪುಷ್ಠಿ ನೀಡುವಂತೆ ಕಳೆದ ಕೆಲದಿನಗಳಿಂದ ಮಾಧ್ಯಮಗಳು ವರದಿ ಮಾಡುತ್ತಿವೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆಗಳು ಬಹಳ ಸಮಯದಿಂದ ಆರಂಭವಾಗಿದೆ. ಈ ಬಗ್ಗೆ ಬಿಜೆಪಿಯ ಕೆಲವು ಶಾಸಕರು ಬಹಿರಂಗ ಹೇಳಿಕೆಯನ್ನು ನೀಡಿದ್ದಾರೆ. ಸದ್ಯ ಈ ಬಗ್ಗೆ ಮಾತನಾಡಿರುವ ಅರ್.ಎಸ್.ಎಸ್ ನಾಯಕರು ಕರ್ನಾಟಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಒಲವು ತೋರಿಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಆರ್.ಎಸ್.ಎಸ್ ನಾಯಕರ ಜೊತೆ ಕಳೆದ ಶನಿವಾರ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿಗಳು ಉನ್ನತ ಮೂಲಗಳಿಂದ ಲಭ್ಯವಾಗಿದೆ. ಅದರೆ ನಿಜಕ್ಕೂ ಕರ್ನಾಟಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಲಿದೆಯಾ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿಗಳು ಲಭ್ಯವಾಗಿಲ್ಲವಾದರೂ ಚರ್ಚೆಗಳು ರಾಜಕೀಯ ವಲಯದಲ್ಲಿರುವುದು ಮಾತ್ರ ಸತ್ಯ.

Comments