ಬಿಜೆಪಿ ಮುಂದಿನ ದಿನಗಳಲ್ಲಿ ಈ ರಾಜ್ಯದಲ್ಲಿ ಅಧಿಕಾರಕ್ಕೆರುವುದು ಖಚಿತ: ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಹೇಳಿಕೆ

ದೇಶದಲ್ಲಿ ಕಳೆದ ಎರಡು ತಿಂಗಳಿನಿಂದ ಚುನಾವಣಾ ಪರ್ವ ಆರಂಭವಾಗಿತ್ತು. ಈ ಚುನಾವಣಾ ವರ್ವ ಸದ್ಯ ಮುಗಿದಂತೆ ಕಾಣುತ್ತಿದೆ. ಎಲ್ಲಾ ಕ್ಷೇತ್ರಗಳ ಚುನಾವಣೆಯ ಫಲಿತಾಂಶ ನಿನ್ನೇ ಹೊರಬಿದ್ದಿದ್ದು ರಾಜಕೀಯ ಪಕ್ಷಗಳ ಹಾಗೂ ರಾಜಕೀಯ ನಾಯಕರ ಹಣೆಬರಹ ಹೊರಬಿದ್ದಿದೆ. ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯ ಜೋರಾದರೆ, ಭಾರೀ ಕುತೂಹಲ ಮೂಡಿಸಿದ್ದ ಪಶ್ಚಿಮಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರ ಪಕ್ಷ ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರಿದೆ.

ಚುನಾವಣೆಯ ಫಲಿತಾಂಶದ ಬಳಿಕ ರಾಜಕೀಯ ಪಕ್ಷಗಳು ತಮ್ಮ ಸೋಲು ಗೆಲುವಿಗೆ ಕಾರಣ ಹಾಗೂ ಮುಂದಿನ ಕಾರ್ಯ ಯೋಜನೆಗಳ ಲೆಕ್ಕಾಚಾರದದಲ್ಲಿ  ತೊಡಗಿದ್ದಾರೆ. ಒಂದು ಲೆಕ್ಕಾಚಾರದ ಪ್ರಕಾರ ಬಿಜೆಪಿಯ ನಿರೀಕ್ಷೆ ಹುಸಿಯಾಗಿದ್ದಾರು, ಬಿಜೆಪಿ ಉತ್ತಮ ಪ್ರದರ್ಶನವನ್ನು ತೋರಿಸಿದೆ. ಪಶ್ಚಿಮ ಬಂಗಾಳದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಮೂರು ಸ್ಥಾನಗಳನ್ನು ಗೆದ್ದಿದ್ದರು ಈ ಬಾರಿ ಸುಮಾರು 78 ಸ್ಥಾನಗಳನ್ನು ಗೆಲ್ಲುವ ಮೂಲಕ  ಪ್ರಮುಖ ವಿರೋಧ ಪಕ್ಷವಾಗಿ ಗುರುತಿಸಿಕೊಂಡಿದೆ.

ದಕ್ಷಿಣ ಭಾರತದಲ್ಲಿ ಬಿಜೆಪಿಯ ಪ್ರಾಬಲ್ಯ ಆರಂಭದಿಂದಲೂ ಕಡಿಮೆಯಾಗಿದ್ದರು, ಈ ಫಲಿತಾಂಶದಲ್ಲೂ ಅಷ್ಟಾಗಿ ಪ್ರಭಾವ ಬೀರದೆ ಇದುದ್ದು ಮತ್ತೊಮ್ಮೆ ಸಾಭೀತಾಗಿದೆ. ಕೇರಳದಲ್ಲಿ ಖಾತೆ ತೆರೆಯಲು ಬಿಜೆಪಿಗೆ ಕಷ್ಟವಾದರೂ ತಮಿಳುನಾಡಿನಲ್ಲೂ ಬಿಜೆಪಿ ಅಷ್ಟೇನೂ ಯಶಸ್ವಿಯಾಗಿಲ್ಲ ಒಟ್ಟಾರೆಯಾಗಿ ಬಿಜೆಪಿ ತನ್ನ ಸಾಮಾರ್ಥ್ಯವನ್ನು ಸುಧಾರಿಸಿದ್ದರು ಇನ್ನೂ ಹೆಚ್ಚಿನ ಶಕ್ತಿ ಬೇಕಾಗಿರುವುದು ಸತ್ಯ. ಕೇರಳದಲ್ಲಿ ಮುಂದಿನ ಐದು ವರ್ಷಗಳ ಬಳಿಕ ಬಿಜೆಪಿ ಅಧಿಕಾರಕ್ಕೆ ಏರಲಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.

Comments