ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಒಂದು ಹೇಳಿಕೆಯಿಂದ ಭಾರೀ ಸಂಚಲನ ಸೃಷ್ಟಿಯಾಗಿದೆ ಮಾತ್ರವಲ್ಲದೆ ಇದು ಯಾವ ದಿಕ್ಕನ್ನು ಪಡೆಯಲಿದೆ ಎಂಬುದು ಭಾರೀ ದೊಡ್ಡ ಮಟ್ಟದಲ್ಲಿ ರಾಜ್ಯ ರಾಜಕೀಯದಲ್ಲಿ ಪ್ರಶ್ನೆಗಳು ಹುಟ್ಟು ಹಾಕುವಂತಾಗಿದೆ. ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಇದು ಒಂದು ದೊಡ್ಡ ಸವಾಲು ಹಾಗೂ ರಾಜ್ಯಕೀಯದ ಸಂಚಲನಕ್ಕೆ ಕಾರಣವಾಗಲಿದೆ ಎಂಬುದು ರಾಜಕೀಯ ಪಂಡಿತರ ಲೆಕ್ಕಾಚಾರ.
ಕರ್ನಾಟಕ ರಾಜಕೀಯದಲ್ಲಿ ಸದ್ಯ ಅತ್ಯಂತ ಪ್ರಭಾವಿ ನಾಯಕರೆಂದರೆ ಅದು ಕರ್ನಾಟಕದ ಹಾಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ. ಯಡಿಯೂರಪ್ಪನವರ ಪರ್ಯಾಯ ನಾಯಕ ಬಿಜೆಪಿಯಲ್ಲಿ ಯಾರು ಎಂದು ಕೇಳಿದರೆ ಬಹುಶಃ ರಾಜ್ಯ ಬಿಜೆಪಿ ನಾಯಕರಲ್ಲಿ ಯಾವುದೇ ಉತ್ತರವಿಲ್ಲ. ಈ ಕಾರಣದಿಂದಲೇ ಬಿಜೆಪಿ ಹೈಕಮಾಂಡ್ ಇನ್ನೂ ಕೂಡ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಯಾವುದೇ ಪ್ರಯತ್ನಕ್ಕೆ ಕೈ ಹಾಕುವ ಪ್ರಯ್ಯತ್ನಕ್ಕೆ ಕೈ ಹಾಕುತ್ತಿಲ್ಲ. ಬಿ.ಎಸ್ ಯಡಿಯೂರಪ್ಪನವರ ಬೆಂಬಲಕ್ಕೆ ಕರ್ನಾಟಕದಲ್ಲಿ ಪ್ರಭಾವಿ ಲಿಂಗಾಯಿತ ಸಮುದಾಯವಿದ್ದು ಯಡಿಯೂರಪ್ಪನವರ ತಾಕತ್ತು ಏನು ಎಂಬುದು ಕೆ.ಜೆ.ಪಿ ಸಂಧರ್ಭದಲ್ಲಿ ಬಿಜೆಪಿ ಹೈಕಮಾಂಡ್ ಗೆ ತಿಳಿದಿದೆ. ಸದ್ಯ ಕರ್ನಾಟಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾದರೆ ಮುಖ್ಯಮಂತ್ರಿ ಪುತ್ರ ಹಾಗೂ ಕರ್ನಾಟಕದ ಚಾಣಕ್ಯ ಎಂದೇ ಖ್ಯಾತಿ ಪಡೆದಿರುವ ಬಿ.ವೈ ವಿಜಯೇಂದ್ರ ಅವರಿಗೆ ಯಾವ ಸ್ಥಾನ ದೊರೆಯಲಿದೆ ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿದೆ.
ಒಂದು ಮೂಲದ ಪ್ರಕಾರ ಒಂದು ವೇಳೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಪುತ್ರ ಬಿ.ವೈ ವಿಜಯೇಂದ್ರ ಅವರಿಗೆ ಮಹತ್ವದ ಸ್ಥಾನವೊಂದನ್ನು ನೀಡಬೇಕಾಗಬಹುದು ಎಂದು ಸದ್ಯ ಎಲ್ಲಾರಿಗೂ ತಿಳಿದಿರುವ ಸತ್ಯ. ಬಿ.ವೈ ವಿಜಯೇಂದ್ರ ಪಕ್ಷ ಸಂಘಟನೆಯಲ್ಲಿ ಮಹತ್ವದ ಕಾರ್ಯವನ್ನು ನಿರ್ವಹಿಸಿರುವುದರಿಂದ ಕರ್ನಾಟಕ ರಾಜ್ಯ ಬಿಜೆಪಿಯ ಅಧ್ಯಕ್ಷ ಸ್ಥಾನ ದೊರೆಯಬಹುದು ಎಂಬ ಮಾತುಗಳು ಕೇಳಿ ಬರುತ್ತಿದೆ
Comments
Post a Comment