ರಾಜಕೀಯ ಎಂಬುದು ನಿಂತ ನೀರಲ್ಲ ಎಂಬುದು ನಿಮಗೆಲ್ಲರಿಗೂ ತಿಳಿದಿರುವ ಸತ್ಯ. ಅದರೆ ಕೆಲವೊಂದು ಬಾರೀ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಜಿತಿನ್ ಪ್ರಸಾದ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ರಾಹುಲ್ ಗಾಂಧಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಜಿತಿನ್ ಪ್ರಸಾದ್ ಬಿಜೆಪಿ ಸೇರುವ ಮೂಲಕ ಬಿಗ್ ಶಾಕ್ ನೀಡಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಜಿತಿನ್ ಪ್ರಸಾದ್ ಅವರು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿಯ ಚಾಣಕ್ಯ ಅಮಿತ್ ಶಾ ಅವರನ್ನು ಭೇಟಿಯಾಗಿ ಬಳಿಕ ಪಕ್ಷಕ್ಕೆ ಸೇರ್ಪಡೆಗೊಂಡರು. ಕಾಂಗ್ರೆಸ್ ಗೆ ಅಧ್ಯಕ್ಷರನ್ನು ನೇಮಕಗೊಳಿಸುವಂತೆ ಪತ್ರ ಬರೆದ 23 ನಾಯಕರಲ್ಲಿ ಜಿತಿನ್ ಪ್ರಸಾದ್ ಕೂಡ ಒಬ್ಬರು. ಕೇಂದ್ರ ಸಚಿವ ಪಿಯೂಸ್ ಗೋಯಲ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು ಜಿತಿನ್ ಪ್ರಸಾದ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಭಾರೀ ಹಿನ್ನಡೆಯಾಗಿದೆ.
Comments
Post a Comment