ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಪಡೆಯಲು ಆರ್ಜಿ ಆಹ್ವಾನ, ಆರ್ಜಿ ಸಲ್ಲಿಸುವ ಮಾಹಿತಿ ಇಲ್ಲಿದೆ


ವಿದ್ಯಾರ್ಥಿಗಳ ಕಲಿಕೆಯ ದೃಷ್ಟಿ ಕೋನದಿಂದ ಉಚಿತವಾಗಿ ಲ್ಯಾಪ್ ಟಾಪ್ ನೀಡುವ ಯೋಜನೆಯನ್ನು ಸರಕಾರ ಜಾರಿಗೆ ತಂದಿತ್ತು. ಕಳೆದ ಕೆಲವು ವರ್ಷಗಳಿಂದ ಈ ಯೋಜನೆ ಚಾಲ್ತಿಯಲ್ಲಿದ್ದು ವಿದ್ಯಾರ್ಥಿಗಳು ಇದರ ಉಪಯೋಗವನ್ನು ಪಡೆದು ಕೊಳ್ಳುತ್ತಿದ್ದಾರೆ. ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಬಹುಮತದಿಂದ ಆಯ್ಕೆಯಾದ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೂಡ ಈ ಯೋಜನೆಯನ್ನು ಜಾರಿಗೊಳಿಸುವ ಇಂಗಿತ ವ್ಯಕ್ತ ಪಡಿಸಿದೆ. ಕೆಲ ದಿನಗಳ ಹಿಂದೆ ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿಗಳು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡುವ ಯೋಜನೆಯನ್ನು ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.

ಮುಖ್ಯಮಂತ್ರಿಗಳ ಅದೇಶದ ಬೆನ್ನಲ್ಲೇ ಲ್ಯಾಪ್ ಟಾಪ್ ವಿತರಣೆಯ ಯೋಜನೆಗೆ ಆರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ರಾಜ್ಯ ಕಾರ್ಮಿಕ ಇಲಾಖೆ ವಿದ್ಯಾರ್ಥಿಗಳಿಂದ ಆರ್ಜಿ ಆಹ್ವಾನಿಸಿದೆ. ಆರ್ಜಿಯಲ್ಲಿನ ಆದೇಶದ ಪ್ರಕಾರ ೨೦೨೩-೨೦೨೪ನೇ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ಆರ್ಜಿ ಸಲ್ಲಿಸಬಹುದು. ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕ ಕಾರ್ಡ್ ಹೊಂದಿರುವ ಕಾರ್ಮಿಕರ ಮಕ್ಕಳು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಉಚಿತ ಲ್ಯಾಪ್ ಟಾಪ್ ಯೋಜಗೆ ಆರ್ಹವಿರುವ ವಿದ್ಯಾರ್ಥಿಗಳು ತಮ್ಮ ಹತ್ತಿರದ ಜಿಲ್ಲಾ ಅಥವಾ ತಾಲೂಕು ಕಾರ್ಮಿಕ ಇಲಾಖೆಯಲ್ಲಿ ಆರ್ಜಿ ನಮೂನೆಯನ್ನು ಪಡೆದುಕೊಂಡು ಆರ್ಜಿ ಸಲ್ಲಿಸಬಹುದಾಗಿದೆ.  ಭರ್ತಿ ಮಾಡಿದ ಅರ್ಜಿಯೊಂದಿಗೆ ಕಟ್ಟಡ ಕಾರ್ಮಿಕರ ನೋಂದಣಿ ಗುರುತಿನ ಚೀಟಿ, ಮಕ್ಕಳ ಆಧಾರ್ ಕಾರ್ಡ್, ವ್ಯಾಸಂಗ ದೃಢೀಕರಣ ಪತ್ರ, ಎಸ್.ಎಸ್.ಎಲ್.ಸಿ. ದೃಢೀಕೃತ ಅಂಕಪಟ್ಟಿ, ಇದುವರೆಗೆ ಯಾವುದೇ ಯೋಜನೆಯಡಿ ಲ್ಯಾಪ್‍ಟಾಪ್ ಪಡೆಯದಿರುವ ಬಗ್ಗೆ ಸ್ವಯಂದೃಢೀಕೃತ ಪತ್ರ ಇವುಗಳನ್ನು ಲಗತ್ತಿಸಿ ಸೆ.15 ರೊಳಗಾಗಿ ಇಲಾಖಾ ಕಚೇರಿಗೆ ಸಲ್ಲಿಸುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Comments