ಇದೀಗ ಬಂದ ಸುದ್ದಿ: ಬಿಜೆಪಿಯಲ್ಲಿ ಘಟಾನುಘಟಿಗಳಿಗೆ ಟಿಕೆಟ್ ಮಿಸ್, ಕೊನೆಗೂ 20 ಆಭ್ಯರ್ಥಿಗಳ ಪಟ್ಟಿ ರಿಲೀಸ್

ಬೆಂಗಳೂರು: ಬಿಜೆಪಿಯ ಆಭ್ಯರ್ಥಿಗಳ ಪಟ್ಟಿ ಬುಧವಾರ ಸಂಜೆ ರಿಲೀಸ್ ಆಗಿದೆ. ಸುಮಾರು ೭ ಜನ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಿದೆ. ಜೆಡಿಎಸ್ ಒಳಗೊಂಡಂತೆ ಸುಮಾರು ೨೦ ಕ್ಷೇತ್ರಗಳ ಪಟ್ಟಿ ರಿಲೀಸ್ ಆಗಿದ್ದು, ಬಹಳ ಕುತೂಹಲ ಕೆರಳಿಸಿದೆ.

ಕರ್ನಾಟಕ ರಾಜ್ಯ ಬಿಜೆಪಿಯ ನಿಕಟಪೂರ್ವ ಅಧ್ಯಕ್ಷ, ಮಂಗಳೂರಿನ ಹಾಲಿ ಸಂಸದ ನಳೀನ್ ಕುಮಾರ್ ಕಟೀಲ್, ಮೈಸೂರು ಸಂಸದ ಪ್ರತಾಪ್ ಸಿಂಹ್, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಹಾಗೂ ಇನ್ನು ಉಳಿದ ೬ ಜನ ಹಾಲಿ ಸಂಸದರಿಗೆ ಟಿಕೆಟ್ ಮಿಸ್ಸ್ ಆಗಿದೆ. ಇವರಲ್ಲಿ ೩ ಜನ ಸ್ವಯಂ ನಿವೃತ್ತಿ ಘೋಷಿಸಿದ್ದರು..

ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಮಂಗಳೂರಿನಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶ್ರೀರಾಮಲು, ಶಿವಮೊಗ್ಗದಿಂದ ಬಿ.ವೈ ರಾಘವೇಂದ್ರ, ಸಿದ್ದೇಶ್ವರ ಪತ್ನಿ, ಹಾಗೂ ಬೆಂಗಳೂರು ಗ್ರಾಮಾಂತರದಿಂದ ಖ್ಯಾತ ವೈದ್ಯ ಡಾ. ಸಿ.ಎನ್ ಮಂಜುನಾಥ್, ಹಾಗೂ ಮೈಸೂರಿನ ಮಹಾರಾಜ ಯಧುವೀರ್ ಅವರಿಗೆ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

Comments