ಬೆಂಗಳೂರು: ೨೦೨೪ರ ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಆಭ್ಯರ್ಥಿಗಳು ಟಿಕೆಟ್ ಗಾಗಿ ಸಾಕಷ್ಟು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಈ ಸಂಧರ್ಭದಲ್ಲಿ ಟಿಕೆಟ್ ಹಂಚಿಕೆ ಹಾಗೂ ಅಂತಿಮ ಆಯ್ಕೆ ಪಟ್ಟಿಯ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಈ ಸಂಬಂಧ ಮಾತನಾಡಿರುವ ಯಡಿಯೂರಪ್ಪ ಹಲವಾರು ವಿಷಯಗಳನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬಿ.ಎಸ್ ಯಡಿಯೂರಪ್ಪನವರು ಕೇಂದ್ರ ಬಿಜೆಪಿಯ ಟಿಕೆಂಟ್ ಹಂಚಿಕೆ ಮಾಡುವ ಸಮಿತಿಯ ಸದಸ್ಯರಾಗಿದ್ದು, ೨ನೇ ಹಂತದ ಅಂತಿಮ ಪಟ್ಟಿಯ ಆಯ್ಕೆಯ ಸಂಬಂಧ ದೆಹಲಿಯಲ್ಲಿ ಸಭೆ ನಡೆಯಲಿದೆ. ಈ ಸಂಧರ್ಭದಲ್ಲಿ ಕರ್ನಾಟಕ ಬಿಜೆಪಿ ೨೮ ಕ್ಷೇತ್ರಗಳ ಆಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿಯ ಮೂಲಕ ಎಲೆಕ್ಷನ್ ಎದುರಿಸಲ್ಲಿದ್ದು ಕಾಂಗ್ರೆಸ್ ಗೆ ಟಕ್ಕರ್ ಕೊಡಲು ಮುಂದಾಗಿದೆ. ಈ ನಡುವೆ ಬಿಜೆಪಿ ಹಲವಾರು ಗೆಮ್ ಪ್ಲಾನ್ ಮೂಲಕ ಮತ್ತೇ ಅಧಿಕಾರ ಚುಕ್ಕಾಣಿ ಹಿಡಿಯಲು ಎಲ್ಲಾ ಪ್ರಯತ್ನವನ್ನು ಮಾಡಲಿದೆ. ಅಂತಿಮವಾಗಿ ಮತದಾರ ಪ್ರಭು ಯಾರ ಕೈ ಹಿಡಿಯಲ್ಲಿದ್ದಾನೆ ಎಂಬುದನ್ನು ಕಾದು ನೋಡಬೇಕಿದೆ.
Comments
Post a Comment