ಬೆಂಗಳೂರು: ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪಕ್ಷದ ನಾಯಕರು ಟಿಕೆಟ್ ಗಾಗಿ ಲಾಭಿ ನಡೆಸಿದರೆ, ಸಾಮಾನ್ಯ ಕಾರ್ಯಕರ್ತರು ಈ ಬಾರಿ ಟಿಕೆಟ್ ಯಾರಿಗೆ ಸಿಗಬಹುದು, ನಾವು ಯಾವ ವ್ಯಕ್ತಿಯ ಪರವಾಗಿ ಕೆಲಸ ಮಾಡಬೇಕು ಎಂಬ ಬಗ್ಗೆ ಭಾರೀ ಜೋರಾಗಿ ಚರ್ಚೆಗಳು ನಡೆಯುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಬಿಜೆಪಿಗೆ ಲೋಕಸಭೆಗೆ ಯಾವ ಆಭ್ಯರ್ಥಿಗಳು ಸ್ಪರ್ಧಿಸಬೇಕು ಎಂಬ ಬಗೆಗಿನ ಅಂತಿಮ ಆಯ್ಕೆ ಈಗಾಗಲೇ ನಡೆದಿದೆ ಎಂದು ಬಿಜೆಪಿಯ ಬಲ್ಲ ಮೂಲಗಳು ತಿಳಿಸಿವೆ.
ಮಂಗಳೂರು, ಮೈಸೂರು, ಉತ್ತರಕನ್ನಡ ಹಾಗೂ ಚಿಕ್ಕಮಗಳೂರು ಕ್ಷೇತ್ರಗಳನ್ನು ಹೊರತುಪಡಿಸಿ ಬಹುತೇಕ ಎಲ್ಲಾ ಕ್ಷೇತ್ರಗಳ ಆಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ದವಾಗಿದೆ ಎಂದು ಹೇಳಲಾಗುತ್ತಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಆ ಪಟ್ಟಿ ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ. ಈ ನಡುವೆ ಮೋದಿ ಹಾಗೂ ಶಾ ಎರಡು ಹಂತದಲ್ಲಿ ಆಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡುವಂತೆ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಬಾಕಿ ಉಳಿದಿರುವ ನಾಲ್ಕು ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಆಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತದೆ. ಈಗಾಗಲೇ ಬಿಜೆಪಿಯ ಕೇಂದ್ರಿಯ ಚುನಾವಣಾ ಸಮಿತಿ ಸಭೆಯಲ್ಲಿ ಈ ಬಗ್ಗೆ ಎಲ್ಲಾ ವಿಷಯಗಳನ್ನು ಚರ್ಚಿಸಿ ಅಂತಿಮ ಹಂತಕ್ಕೆ ತರುವ ಎಲ್ಲಾ ಪ್ರಯತ್ನಗಳು ನಡೆದಿದೆ ಎಂದು ಹೇಳಲಾಗಿದೆ. ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿ ಚುನಾವಣೆ ಎದುರಿಸಲಿದ್ದು ಬಿಜೆಪಿ, ಜೆಡಿಎಸ್ ಗೆ ನಾಲ್ಕು ಸ್ಥಾನಗಳನ್ನು ಬಿಟ್ಟು ಕೊಟ್ಟಿದೆ ಎಂದು ಜೆಡಿಎಸ್ ಉನ್ನತ ಮೂಲಗಳು ತಿಳಿಸಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಖ್ಯಾತ ವೈದ್ಯ ಹಾಗೂ ಜಯದೇವ ಸಂಸ್ಥೆಯ ಮಾಜಿ ನಿರ್ದೇಶಕರ ಡಾ. ಸಿಎನ್ ಮಂಜುನಾಥ್ ಅವರಿಗೆ ಟಿಕೆಟ್ ನೀಡಲಾಗುತ್ತಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಡಿ.ಕೆ ಸುರೇಶ್ ಅವರಿಗೆ ಟಿಕೆಟ್ ನೀಡಿದೆ. ಮಂಗಳೂರು, ಮೈಸೂರು, ಚಿಕ್ಕಮಗಳೂರು ಹಾಗೂ ಉತ್ತರಕನ್ನಡಕ್ಕೆ ಇನ್ನೂ ಆಭ್ಯರ್ಥಿಗಳ ಆಯ್ಕೆ ಅಂತಿಮವಾಗಿಲ್ಲ ಶೀಘ್ರವೇ ಅಂತಿಮಗೊಳಿಸಲು ಸೂಚಿಸಲಾಗಿದೆ.
Comments
Post a Comment